More

    ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರು ಭಯಪಡುವುದು ಬೇಡ ಎಂದು ಅಭಯ ನೀಡಿದ ಮಹಾ ಸಿಎಂ

    ಮುಂಬೈ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರು ಭಯಪಡುವುದು ಬೇಡ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅಭಯ ನೀಡಿದರು.

    ಸಿಂಧುದರ್ಗ್ ಜಿಲ್ಲೆ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ನಿಲ್ಲಿಸಲು ಸರ್ಕಾರ ಇದುವರೆಗೆ ಯಾವುದೇ ನಿರ್ಧಾರ ಮಾಡಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯೆ ನೋಂದಣಿ ಎರಡು ಪ್ರತ್ಯೇಕ ವಿಷಯಗಳಾಗಿವೆ. ಮಹಾರಾಷ್ಟ್ರದ ಜನರು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಯಾವುದೇ ಭೀತಿ ಹೊಂದುವುದು ಬೇಡ. ಎನ್‌ಪಿಆರ್ ಜನಗಣತಿ, ವಿವಿಧ ಕಾಲಂಗಳ ಮೂಲಕ ಮಾಹಿತಿ ಕೋರಿ ಅದನ್ನು ಪಡೆಯಲಾಗುತ್ತದೆ. ಹೀಗಾಗಿ ಇದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ನಾನು ಭಾವಿಸಿದ್ದೇನೆ. ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತದೆ. ಅದೇ ರೀತಿ ಈಗ ಜನಗಣತಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
    ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯನ್ನು ಅಂದು ಬಿಜೆಪಿಯ ಮಿತ್ರ ಪಕ್ಷವಾಗಿದ್ದ ಶಿವಸೇನೆ ಬೆಂಬಲಿಸಿತ್ತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts