More

    ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ರಾಜ್ಯದ 865 ಹಳ್ಳಿಗಳಿಗೆ ಆರೋಗ್ಯ ಯೋಜನೆ ವಿಸ್ತರಿಸಿದ ಮಹಾ ಸರ್ಕಾರ

    ಮುಂಬೈ: ಬೆಳಗಾವಿ ಗಡಿ ವಿವಾದದ ನಡುವೆ ಮಹಾರಾಷ್ಟ್ರ ಸರ್ಕಾರವು ಕರ್ನಾಟಕದ 865 ಹಳ್ಳಿಗಳಿಗೆ ಆರೋಗ್ಯ ಯೋಜನೆಯನ್ನು ವಿಸ್ತರಿಸುವಂತೆ ಸೋಮವಾರ ಆದೇಶ ಹೊರಡಿಸಿದೆ.

    ಈಗಾಗಲೇ ಅಂತ್ಯೋಧ್ಯಯ ಆಹಾರ ಯೋಜನೆ, ಅನ್ನಪೂರ್ಣ ಪಡಿತರ ಚೀಟಿ ಹೊಂದಿರುವವರು ಮಹಾತ್ಮ ಜ್ಯೋತಿ ಜ್ಯೋತಿರಾವ್​ ಪುಲೆ ಜನ್​ ಆರೋಗ್ಯ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು ಎಂದು ಮಹಾರಾಷ್ಟ್ರ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

    ಇದನ್ನೂ ಓದಿ: 12ನೇ ತರಗತಿ ವಿದ್ಯಾರ್ಥಿಗಳಿಗಿಲ್ಲ ಮೊಘಲ್​ ಅಧ್ಯಯನ;ವ್ಯಾಪಕ ಖಂಡನೆ

    ಕರ್ನಾಟಕದ ಬೆಳಗಾವಿ, ಕಾರವಾರ, ಕಲಬುರಗಿ, ಬೀದರ್​ ಜಿಲ್ಲಾ ವ್ಯಾಪ್ತಿಯಲ್ಲಿರುವ 12 ತಾಲ್ಲೂಕುಗಳ 865 ಹಳ್ಳಿಗಳ ಜನರು ಈ ಯೋಜನೆಯ ವ್ಯಾಪ್ತಿಗೆ ಬರುತ್ತಾರೆಂದು ಹೇಳಲಾಗಿದೆ. ಈ ಯೋಜನೆಯಡಿ ಒಂದು ಕುಟುಂಬವು ಸರ್ಕಾರ ಗುರುತಿಸಿರುವ 34 ಆಸ್ಪತ್ರೆಗಳಲ್ಲಿ 1.5 ಲಕ್ಷ ರೂಪಾಯಿ ವರೆಗಿನ 996 ತರಹದ ಚಿಕಿತ್ಸೆ ಪಡೆಯಬಹುದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

    ಜನರು ಮಹಾತ್ಮ ಜ್ಯೋತಿರಾವ್​ ಪುಲೆ ಆರೋಗ್ಯ ಯೋಜನೆಯಡಿ ಸರ್ಕಾರಿ ಹಾಗೂ ಸರ್ಕಾರ ಗುರುತಿಸಿರುವ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಯೋಜನ ಪಡೆಯಬಹುದು ಎಂದು ಮಹಾರಾಷ್ಟ್ರ ಸರ್ಕಾರ ಸೋಮವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts