More

    ಮಹಾ ವಿಕಾಸ್​ ಅಘಾಡಿ ಸೀಟು ಹಂಚಿಕೆ ಫೈನಲ್; ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರ, ಇಲ್ಲಿದೆ ಮಾಹಿತಿ

    ಮುಂಬೈ: ಮುಂಬರವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

    ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದದ ಪ್ರಕಾರ 48 ಲೋಕಸಭೆ ಕ್ಷೇತ್ರಗಳ ಪೈಕಿ ಮಾಜಿ ಸಿಎಂ ಉದ್ಧವ್​ ಠಾಕ್ರೆ ನೇತೃತ್ವದ ಶಿವಸೇನೆ 20, ಕಾಂಗ್ರೆಸ್​ 18 ಹಾಗೂ ಶರದ್​ ಪವಾರ್​ ಬಣದ ಎನ್​ಸಿಪಿ (10) ಸ್ಥಾನಗಳಲ್ಲಿ ಸ್ಫರ್ಧಿಸಲಿದೆ ಎಂದು ತಿಳಿದು ಬಂದಿದೆ.

    ಇದನ್ನೂ ಓದಿ: ಅಂಬಾನಿ ಮಗನ ವಿವಾಹ ಪೂರ್ವ ಸಮಾರಂಭಕ್ಕೆ ಖ್ಯಾತ ಗಾಯಕಿ ಪಡೆದಿರುವ ಸಂಭಾವನೆ ಕೇಳಿದರೆ ನೀವು ಶಾಕ್​ ಆಗೋದು ಪಕ್ಕಾ!

    ಈ ಹಿಂದೆ ಐದು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದ ವಂಚಿತ್ ಬಹುಜನ್ ಅಘಾಡಿ, ಉದ್ಧವ್ ಶಿವ ಸೇನೆ ಬಣದ ಪಾಲಿನಿಂದ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಹಾಗೂ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲದೊಂದಿಗೆ ರಾಜು ಶೆಟ್ಟಿ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಲಿದ್ದಾರೆಂದು ತಿಳಿದು ಬಂದಿದೆ. ಮುಂಬೈನ 6 ಕ್ಷೇತ್ರಗಳಲ್ಲಿ 4ರಲ್ಲಿ ಶಿವಸೇನೆ ಹಾಗೂ 1ರಲ್ಲಿ ವಿಬಿಎ ಸ್ಪರ್ಧಿಸುವ ಸಾಧ್ಯತೆ ಇದೆ.

    2019ರಲ್ಲಿ ಬಿಜೆಪಿ ಜೊತೆ ಸ್ಪರ್ಧಿಸಿದ್ದ ಶಿವಸೇನೆ 23 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 18ರಲ್ಲಿ ಜಯ ಸಾಧಿಸಿತ್ತು. ಮುಂಬೈ ಸೌತ್​ ಸೆಂಟ್ರಲ್ ಹಾಗೂ ನಾರ್ತ್​ವೆಸ್ಟ್​ ಎರಡರಲ್ಲೂ ಗೆಲುವು ಸಾಧಿಸಿತ್ತು. ಆದರೆ ಈಗ ಬಹುಪಾಲು ಗೆದ್ದ ಸಂಸದರು ಶಿಂಧೆ ಬಣದಲ್ಲಿದ್ದಾರೆ. ಇನ್ನು ಕಾಂಗ್ರೆಸ್​ 25 ಕ್ಷೇತ್ರದಲ್ಲಿ ಸ್ಪರ್ಧಿಸಿ ಒಂದರಲ್ಲಿ ಗೆದ್ದರೆ, ಶರದ್​ ಪವಾರ್ ಎನ್​ಸಿಪಿ 19ರಲ್ಲಿ ಸ್ಪರ್ಧಿಸಿ 4ರಲ್ಲಿ ಗೆದ್ದಿದೆ ಈಗ ಎನ್​ಸಿಪಿ ಕೂಡ 2 ಬಣವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts