

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ ರೆಬೆಲ್ ನಾಯಕ ಏಕನಾಥ್ ಶಿಂಧೆ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸಿವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಶಿಂಧೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.
ಜೂನ್ 21 ರಿಂದ ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ರೆಬೆಲ್ ಶಾಸಕರ ನಿರ್ಣಯ ಕುರಿತು ಚರ್ಚಿಸಲಾಗಿದ್ದು, ಇತ್ತ ಬಂಡಾಯವೆದ್ದಿರುವ ಬಂಡಾಯವೆದ್ದಿರುವ ನಾಯಕರ ವಿರುದ್ಧ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ ಶಿವಸೇನೆ ರೆಬೆಲ್ ಶಾಸಕರಿಗೆ ಅನರ್ಹಗೊಳಿಸಿ ನೋಟಿಸ್ ಕೂಡ ಜಾರಿ ಮಾಡಿದೆ.
ಸದ್ಯ ಸುಪ್ರೀಂಕೋರ್ಟ್ ಅಂಗಳದಲ್ಲಿ ಅನರ್ಹ ನೊಟೀಸ್ ವಿಚಾರಣೆ ನಡೆಯಲಿದ್ದು, ನಂತರವೇ ಶಿಂಧೆ ಬಣ ಯಾವ ಹೆಜ್ಜೆ ಇಡಲಿದೆ ಎಂಬುದನ್ನು ಕಾದುನೋಡಬೇಕಿದೆ. (ಏಜೆನ್ಸೀಸ್)