Tuesday, 20th November 2018  

Vijayavani

ಕಬ್ಬು ಬೆಳಗಾರರ ಜತೆ ಸಿಎಂ ಸಭೆ - ವಿಧಾನಸೌಧಕ್ಕೆ ಆಗಮಿಸಿದ ರೈತ ಮುಖಂಡರು - ಕಬ್ಬಿನ ಬಾಕಿ ಹಣ ಕೊಡಿಸ್ತಾರಾ ಎಚ್‌ಡಿಕೆ?        ಉ-ಕ ರೈತರ ಹೋರಾಟಕ್ಕೆ ಜಾತಿ ಲೇಪನ - ನಾಲಾಯಕ್ ಅನ್ನೋದು ಕೆಟ್ಟ ಪದ ಅಲ್ಲ - ಸಿಎಂ ವಿರುದ್ಧ ಮತ್ತೆ ಗುಡುಗಿದ ಯಡಿಯೂರಪ್ಪ        ಸಿಂಪಲ್ ಮ್ಯಾರೇಜ್ ಆಗೋರಿಗೆ ಶಾಕ್‌- ಮುಜರಾಯಿ ದೇವಸ್ಥಾನದಲ್ಲಿ ಮದುವೆಗೆ ಬ್ರೇಕ್‌ - ಅರ್ಚಕರ ಮನವಿಗೆ ಇಲಾಖೆ ನಿರ್ಧಾರ        ದಿಗ್ಗಜರಿಂದಲೇ ಬಿಬಿಎಂಪಿಗೆ ಬಾಕಿ - ಜಾರ್ಜ್‌, ಹ್ಯಾರೀಸ್‌, ಕುಪೇಂದ್ರರೆಡ್ಡಿ ಕಟ್ಟಿಲ್ಲ ಟ್ಯಾಕ್ಸ್‌ - ಪಾಲಿಕೆ ದಿವಾಳಿಗೆ ಕಾರಣರಾದ್ರಾ ನಾಯಕರು        ಛತ್ತಿಸ್‌ಗಡದಲ್ಲಿ ಎರಡನೇ ಹಂತದ ಮತದಾನ -72 ವಿಧಾನಸಭಾ ಕ್ಷೇತ್ರಗಳಲ್ಲಿ ವೋಟಿಂಗ್‌ - ಮಧ್ಯ ಪ್ರದೇಶದಲ್ಲಿ ಪ್ರಧಾನಿ ರ‍್ಯಾಲಿ        ಬೆಂಗಳೂರಿಗೆ ಬಂದಿಳಿದ ನವಜೋಡಿ - ಮುಂಬೈನಿಂದ ಸಿಲಿಕಾನ್‌ ಸಿಟಿಗೆ ರಣವೀರ್‌, ದೀಪಿಕಾ - ನಾಳೆ ಲೀಲಾ ಪ್ಯಾಲೇಸ್‌ನಲ್ಲಿ ರಿಸೆಪ್ಷನ್       
Breaking News

ನದಿಯ ಪ್ರವಾಹ ಲೆಕ್ಕಿಸದೆ ನೀರಿಗಿಳಿದ ವ್ಯಕ್ತಿ ನೀರುಪಾಲು

Sunday, 10.06.2018, 8:21 AM       No Comments

ಚಿಕ್ಕೋಡಿ: ಭಾರಿ ಮಳೆಯಿಂದಾಗಿ ನದಿಯಲ್ಲಿ ಉಂಟಾದ ಪ್ರವಾಹವನ್ನು ಲೆಕ್ಕಿಸದ ನೀರಿಗಿಳಿದ ವ್ಯಕ್ತಿಯೊಬ್ಬ ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ನಾಗೇವಾಡಿಯ ಧರಣಿ ನದಿಯಲ್ಲಿ ನಡೆದಿದೆ.

ಮುಂಗಾರು ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆಯಿಂದಲೇ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಲಾತೂರ್ ಜಿಲ್ಲೆ ಅನಂತಪಾಲ್ ತಾಲೂಕಿನ ನಾಗೇವಾಡಿಯಲ್ಲಿರುವ ಧರಣಿ ನದಿಯಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ.

ನದಿಯಲ್ಲಿ ಪ್ರವಾಹ ಸ್ಥಿತಿಯಿದ್ದರೂ ನದಿ ದಾಟುವ ದುಸ್ಸಾಹಸಕ್ಕೆ ಕೈ ಹಾಕಿದ ವ್ಯಕ್ತಿ, ನೋಡ ನೋಡುತ್ತಿದ್ದಂತೆಯೇ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದಾನೆ. ವ್ಯಕ್ತಿಯ ಬಗ್ಗೆ ಖಚಿತ ಮಾಹಿತಿ ತಿಳಿದುಬರಬೇಕಿದೆ. ನದಿ ನೀರಲ್ಲಿ ವ್ಯಕ್ತಿ ಕೊಚ್ಚಿ ಹೋಗುತ್ತಿರುವ ವೀಡಿಯೋ ವೈರಲ್ ಆಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top