ಹುಬ್ಬಳ್ಳಿ: ಮಹಿಳೆಯರು ಹೆಚ್ಚು ಧರ್ಮವನ್ನು ಪಾಲಿಸುವವರಾಗಿದ್ದಾರೆ. ತಾಯಂದಿರು ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ಕಲಿಸಬೇಕು ಎಂದು ಹಾನಗಲ್ಲ ತಾಲೂಕಿನ ಬೊಮ್ಮನಹಳ್ಳಿ ವಿರಕ್ತಮಠದ ಶ್ರೀ ಶಿವಯೋಗಿಶ್ವರ ಸ್ವಾಮೀಜಿ ಹೇಳಿದರು.
ವಿದ್ಯಾನಗರದ ಬನಶಂಕರಿ ಬಡಾವಣೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ದೇವಿ ಮೂರ್ತಿ ಪ್ರತಿಷ್ಠಾಪನೆಯ 28ನೇ ವಾರ್ಷಿಕೋತ್ಸವ ನಿಮಿತ್ತ ಮಂಗಳವಾರ ಏರ್ಪಡಿಸಿದ್ದ ಧರ್ಮ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.
ಮುಂದಿನ ಪೀಳಿಗೆಗೆ ನೈಸರ್ಗಿಕ ಸಂಪತ್ತನ್ನು ಯಥೇಚ್ಛವಾಗಿ ಬಿಟ್ಟು ಹೋಗಬೇಕಿದೆ. ಅಗತ್ಯವಿರುವಷ್ಟು, ಭೂಮಿ, ನೀರನ್ನು ಬಳಸೋಣ. ನೀರು ಮತ್ತು ಆಹಾರವನ್ನು ಪೋಲು ಮಾಡಬಾರದು. ಪ್ರತಿಯೊಬ್ಬರೂ ಹೆಚ್ಚೆಚ್ಚು ಗಿಡ-ಮರ ಬೆಳೆಸಬೇಕು ಎಂದರು.
ಉಪ್ಪಿನಬೆಟಗೇರಿ ವಿರಕ್ತಮಠದ ಶ್ರೀ ವಿರೂಪಾಕ್ಷೇಶ್ವರ ಸ್ವಾಮೀಜಿ ಮಾತನಾಡಿ, ಕುಟುಂಬ ಸದಸ್ಯರು, ಓಣಿಯವರು, ಊರಿನವರು ಒಂದೆಡೆ ಸೇರುವುದು ಉತ್ಸವದ ನಿಮಿತ್ತ ಮಾತ್ರ. ಹಾಗೆ ಸೇರಿದಾಗ ಎಲ್ಲರೂ ಧರ್ಮ ಮಾರ್ಗದಲ್ಲಿ ಜೀವನ ನಡೆಸುವ ಸಂಕಲ್ಪ ಮಾಡುವುದು, ಎಲ್ಲರ ಕುಶಲೋಪರಿ ನಡೆಸುವುದು ಮುಖ್ಯವಾಗಿರುತ್ತದೆ ಎಂದರು.
ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಅಜೀತ ರೋಖಡೆ, ಬನಶಂಕರಿ ಬಡಾವಣೆ ನಿವಾಸಿಗಳ ಸಂಘದ ಅಧ್ಯಕ್ಷ ರಂಗಯ್ಯ ಬಿಜೂರ, ಸಾಹಿತಿ ಕೆ. ಶಾಂತಕ್ಕ ಇತರರಿದ್ದರು. ಎಲ್.ಬಿ. ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.
ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips
ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…
ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…
ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes
grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…