More

    ಮಹರ್ಷಿ ವಾಲ್ಮೀಕಿ ಹೆಸರು ಅಜರಾಮರ; ಶಾಸಕ ಸೋಮಶೇಖರರೆಡ್ಡಿ ಅಭಿಪ್ರಾಯ

    ಬಳ್ಳಾರಿ: ರಾವಾಯಣ ಮಹಾಕಾವ್ಯದ ಕೊಡುಗೆ ನೀಡಿದ ಮಹರ್ಷಿ ವಾಲ್ಮೀಕಿಯ ಹೆಸರು ಸೂರ್ಯ ಹಾಗೂ ಚಂದ್ರ ಇರುವವರೆಗೆ ಅಜರಾಮರವಾಗಿರುತ್ತದೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು.

    ನಗರದ ನಲ್ಲಚೆರುವು ಪ್ರದೇಶದಲ್ಲಿರುವ ಮಹರ್ಷಿ ವಾಲ್ಮೀಕಿ ಭವನದಲ್ಲಿ ಶನಿವಾರ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ರಾಮಾಯಣ ಮಹಾಕಾವ್ಯದ ಮೂಲಕ ಸ್ವಸ್ಥ, ನ್ಯಾಯಯುತ ಹಾಗೂ ಸವಾನ ಸವಾಜದ ಪರಿಕಲ್ಪನೆಯನ್ನು ಮೂಡಿಸಿದರು ಎಂದು ಅಭಿಪ್ರಾಯಪಟ್ಟರು.

    ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅದಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಸವಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎನ್.ರಾಜಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಶುಭಾ, ಮಹಾನಗರ ಪಾಲಿಕೆ ಪ್ರಭಾರ ಆಯುಕ್ತ ಈರಪ್ಪ ಬಿರಾದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ಸಮುದಾಯದ ಮುಖಂಡರು ಹಾಜರಿದ್ದರು.

    ಹೊಸಪೇಟೆ: ನಗರದ ತಹಸಿಲ್ ಕಚೇರಿಯಲ್ಲಿ ತಹಸೀಲ್ದಾರ್ ಎಚ್.ವಿಶ್ವನಾಥ ಹಾಗೂ ಸಮುದಾಯದ ಮುಖಂಡರು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮುಖಂಡರಾದ ಗುಜ್ಜಲ ಶಿವರಾಮಪ್ಪ, ಶಿರಸ್ತೇದಾರ್ ಶ್ರೀಧರ ಹಾಗೂ ಇತರರು ಇದ್ದರು.

    ಕನ್ನಡ ವಿವಿ: ರಾವಾಯಣ ಮಹಾಕಾವ್ಯ ಪ್ರತಿಯೊಬ್ಬರ ಬದುಕಿಗೂ ವಾರ್ಗದರ್ಶಕವಾಗಿದೆ ಎಂದು ಕನ್ನಡ ವಿವಿ ಕುಲಪತಿ ಡಾ. ಸ.ಚಿ.ರಮೇಶ ಅಭಿಪ್ರಾಯಪಟ್ಟರು. ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ವಾಲ್ಮೀಕಿ ಅಧ್ಯಯನ ಪೀಠದಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಮಾಯಣ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಕುಲಸಚಿವ ಎ.ಸುಬ್ಬಣ್ಣ ರೈ, ವಾಲ್ಮೀಕಿ ಅಧ್ಯಯನ ಪೀಠದ ಸಂಚಾಲಕ ಅಮರೇಶ ಯತಗಲ್, ಪ್ರಾಧ್ಯಾಪಕರಾದ ವಾಧವ ಪೆರಾಜೆ, ಸಿ.ಮಹಾದೇವ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts