More

    ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆ

    ಕೊಪ್ಪಳ: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಶನಿವಾರ ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

    ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಜಿಪಂ ಸದಸ್ಯರಾದ ರಾಮಣ್ಣ ಚೌಡ್ಕಿ, ಗವಿಸಿದ್ದಪ್ಪ ಕರಡಿ, ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಎಡಿಸಿ ಎಂ.ಪಿ.ಮಾರುತಿ, ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಸಮಾಜ ಕಲ್ಯಾಣ ಇಲಾಖೆ ಉಪನಿದೇಶಕ ಲಕ್ಷ್ಮಣ ಬಬಲಿ, ಸಮುದಾಯದ ಮುಖಂಡರು ಇದ್ದರು.

    ಸಾಧಕರಿಗೆ ಸನ್ಮಾನ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ಹಲಗಲಿ ಬೇಡರಾದ ಜಡಗ ಮತ್ತು ಬಾಲ ಅವರ ಸ್ಮರಣಾರ್ಥ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.97.28 ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಭಾಗ್ಯನಗರದ ನವಚೇತನ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂದೀಪ ಮುದ್ಲಾಪುರ (ಸಾ.ಗುಳದಳ್ಳಿ) ಎಂಬ ವಿದ್ಯಾರ್ಥಿಗೆ ಒಂದು ಲಕ್ಷ ರೂ. ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಎಂ.ಎ.ಸಮಾಜಶಾಸ್ತ್ರ ಪದವಿಯಲ್ಲಿ ಸ್ವರ್ಣ ಪದಕ ಪಡೆದ ಗಂಗಾವತಿಯ ಕೊಲ್ಲಿ ನಾಗೇಶ್ವರರಾವ್ ಕಾಲೇಜಿನ ವಿದ್ಯಾರ್ಥಿ ಕನಕರಾಯಗೌಡ ಕೇಶಪ್ಪಗೌಡ (ಸಾ.ಎಂ.ರಾಂಪುರ) ರವರನ್ನು ಸನ್ಮಾನಿಸಲಾಯಿತು.

    ಜಿಲ್ಲಾ ಗೃಹ ರಕ್ಷಕಕದಳ ಕಚೇರಿಯಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಉಪ ಸಮಾದೇಷ್ಟರಾದ ರಾಜೇಂದ್ರನ್ ಆರ್., ಎಫ್.ಎಂ.ಮಜ್ಜಗಿ, ಬಾಬುಸಾಬ್ ಕೆ.ಪಿಂಜಾರ, ಕೆ.ಸಂಜೀವ ಕುಮಾರ, ಶರಣಪ್ಪ ಎಂ., ಯಲ್ಲಪ್ಪ ಟಿ. ಹಾಗೂ ಗೃಹರಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts