25.9 C
Bengaluru
Wednesday, January 22, 2020

ಕಲ್ಲಂಗಡಿಯಲ್ಲಿ ಮಹಾತ್ಮ ಗಾಂಧಿ, ಅಂಬೇಡ್ಕರ್, ಅಬ್ದುಲ್ ಕಲಾಂ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

|ಬೇಲೂರು ಹರೀಶ್ ಬೆಂಗಳೂರು

ದೇಶದ ಪ್ರಸಿದ್ಧ ಮಹನೀಯರು, ರಾಜಕೀಯ ನಾಯಕರು, ನಟರನ್ನು ತರಕಾರಿ, ಹಣ್ಣುಗಳಲ್ಲಿ ರಚಿಸುವ ಮೂಲಕ ಆರ್. ನವೀನ್ ಸಾಯಿ ಹೊಸ ಟ್ರೆಂಡ್​ಗೆ ನಾಂದಿ ಹಾಡಿದ್ದಾರೆ.

ವಿಜಯನಗರದ ನಿವಾಸಿ ನವೀನ್ ಸಾಯಿ ಓದಿದ್ದು 10ನೇ ತರಗತಿಯಾದರೂ ಕಲಿತದ್ದು ಅಪಾರ. ಬಾಲ್ಯದಲ್ಲಿನ ಚಿತ್ರ ಬರೆಯುವ ಹವ್ಯಾಸವೇ ಇವರಿಗೆ ಹಲವು ಬಗೆಯ ಹಣ್ಣು ಮತ್ತು ತರಕಾರಿಗಳಲ್ಲಿ ವೈವಿಧ್ಯಮಯ ಚಿತ್ರ ಬರೆಯಲು ಕಾರಣವಾಗಿದೆ. ಕೆಲಸ ಸಿಗದಿದ್ದಾಗ ಚೆನ್ನೈನಲ್ಲಿ ಕಾರ್ವಿಂಗ್ ಕಲಿತಿರುವ ನವೀನ್ ಹೋಟೆಲ್​ನಲ್ಲಿ ಪ್ರಧಾನ ವ್ಯವಸ್ಥಾಪಕರಾಗಿದ್ದಾರೆ.

ವಿವಿಧ ವಿನ್ಯಾಸ: ಕಲ್ಲಂಗಡಿಯಲ್ಲಿ ಮಹಾತ್ಮ ಗಾಂಧಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ಎಪಿಜೆ ಅಬ್ದುಲ್ ಕಲಾಂ, ಸಾಯಿಬಾಬಾ, ನಿರ್ಮಲಾನಂದನಾಥ ಸ್ವಾಮೀಜಿ ಸೇರಿ ಹಲವು ಮಹಾನ್ ವ್ಯಕ್ತಿಗಳ ಚಿತ್ರಗಳನ್ನು ಬಿಡಿಸಿದ್ದಾರೆ. ಮದುವೆ, ಸಭೆ, ಸಮಾರಂಭ, ಕೃಷಿ ಮೇಳ, ಜಾತ್ರೆ, ವಿಶೇಷ ದಿನ, ಉತ್ಸವ ದಿನಗಳಲ್ಲಿ ತರಕಾರಿ ಮತ್ತು ಹಣ್ಣುಗಳಲ್ಲಿ ವೈವಿಧ್ಯಮಯ ಚಿತ್ತಾರ ಮೂಡಿಸುತ್ತಾರೆ. 15 ವರ್ಷಗಳಿಂದ ವಿವಿಧ ಕಾರ್ವಿಂಗ್​ನಲ್ಲಿ 3 ಸಾವಿರ ಚಿತ್ತಾರಗಳನ್ನು ಬಿಡಿಸಿದ್ದಾರೆ.

ಅರ್ಧ ಗಂಟೆಯಲ್ಲೇ ಕೆತ್ತನೆ: ತರಕಾರಿ ಮತ್ತು ಹಣ್ಣುಗಳನ್ನು ಕೈಯಲ್ಲಿ ಹಿಡಿದುಕೊಂಡರೆ ಅರ್ಧ ಗಂಟೆಯಲ್ಲೇ ಪ್ರಾಣಿ, ಪಕ್ಷಿ, ದೇವರು ಮತ್ತು ಮನುಷ್ಯನ ರೂಪ ತಾಳುತ್ತವೆ. ಕಲ್ಲಂಗಡಿ ಹಣ್ಣು ಮನುಷ್ಯನಾಗುತ್ತಾನೆ. ವಿವಿಧ ಬಗೆಯ ಹೂವುಗಳು ಅರಳುತ್ತವೆ. ಪಪ್ಪಾಯದಲ್ಲೂ ನಾಯಿ, ಆನೆ, ಸೂರ್ಯಕಾಂತಿ ಹೂವು ಸೇರಿ ಹಲವು ವಿನ್ಯಾಸ ಮೈದಳೆದಿವೆ. ಕುಂಬಳಕಾಯಿಯಲ್ಲಿ ಗುಲಾಬಿ ಹೂವುಗಳು ಅರಳಿದರೆ, ಹಣ್ಣಾದ ಪಪ್ಪಾಯಿ ಹಕ್ಕಿಯಾಗಿ ರೂಪಾಂತರಗೊಂಡು ಹಾರಾಡಲು ಸಿದ್ಧವಾಗಿರುವಂತಿದೆ. ಒಂದಕ್ಕಿಂತ ಒಂದು ನೋಡುಗರನ್ನು ಸೆಳೆಯುತ್ತದೆ.

ಸಜ್ಜನರ್​ಗೆ ಗೌರವ: ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್​ನ ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್​ಕೌಂಟರ್ ಮಾಡಿದ್ದ ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ ಸಜ್ಜನರ್ ಅವರನ್ನು ಕಲ್ಲಂಗಡಿಯಲ್ಲಿ ಅರಳಿಸಿ ‘ಜಸ್ಟೀಸ್ ಸರ್ವ್ಡ್ ಹ್ಯಾಟ್ಸ್ ಆಫ್’ ಎಂದು ಬರೆದು ಗೌರವ ಸೂಚಿಸಿದ್ದಾರೆ.

ನಗರದಲ್ಲಿ ಕಾರ್ವಿಂಗ್ ಶಾಲೆ ಆರಂಭಿಸಬೇಕೆಂಬ ಹಂಬಲ ಇದೆ. ನಿರುದ್ಯೋಗಿಗಳಿಗೆ, ಕ್ಯಾಟರಿಂಗ್ ಮಾಡುತ್ತಿರುವವರಿಗೆ ಈ ಕಲೆ ಕಲಿಸಬೇಕೆಂಬ ಆಸಕ್ತಿ ಇದೆ.

| ಆರ್. ನವೀನ್ ಸಾಯಿ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...