More

    ಗಾಂಧಿ ಜಯಂತಿ 2023; ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಪ್ರಮುಖ ಗಣ್ಯರು

    ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್​ ಧನಕರ್​, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ.

    ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮ ಗಾಂಧೀಜಿ ಅಳಿಸಲಾಗದ ಪ್ರಮುಖ ಪಾತ್ರವನನ್ನು ವಹಿಸಿದ್ದಾರೆ. ಭಾರತವನ್ನು ವಸಾಹತುಶಾಹಿ ಆಡಳಿತದಿಂದ ಮುಕ್ತಗೊಳಿಸಲು ಹಲವು ಹೋರಾಟಗಳನ್ನು ಮುನ್ನಡೆಸಿದ್ದರು. ಅವರು ಅನೇಕರ ಜೀವನದಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದ್ದಾರೆ ಎಂದು ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದ ಬಳಿಕ ಗಣ್ಯರು ಹೇಳಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ ಗಾಂಧಿ ಜಯಂತಿಯ ಜನ್ಮ ದಿನಾಚರಣೆಯ ಅಂಗವಾಗಿ ನಾನು ಅವರಿಗೆ ನಮಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಮಾರ್ಗವನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸುತ್ತದೆ.

    ಇದನ್ನೂ ಓದಿ: ಏಷ್ಯನ್​ ಗೇಮ್ಸ್​; ಶಾಟ್​ಪುಟ್​ನಲ್ಲಿ ಭಾರತದ ತಜಿಂದರ್​ಪಾಲ್​ ಸಿಂಗ್ ತೂರ್​ಗೆ ಸ್ವರ್ಣ

    ಹೆಚ್ಚಿಸಲು ಪ್ರೇರೇಪಿಸುತ್ತದೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ. ಅವರ ಆಲೋಚನೆಗಳು ಪ್ರತಿಯೊಬ್ಬ ಯುವಕನು ಅವನರು ಕನಸು ಕಂಡ ಬದಲಾವಣೆಯ ಏಜೆಂಟ್ ಆಗಲು ಸಾಧ್ಯವಾಗಲಿ, ಎಲ್ಲದರಲ್ಲೂ ಏಕತೆ ಮತ್ತು ಸಾಮರಸ್ಯವನ್ನು ಬೆಳೆಸಲಿ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್​ ಧನಕರ್​, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ದೆಹಲಿ ಲೆಫ್ಟಿನೆಂಟ್​ ಗವರ್​ನರ್​ ವಿ.ಕೆ. ಸಕ್ಸೇನಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts