ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ

ವಿಜಯಪುರ: ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥುರಾಮ್ ಗೋಡ್ಸೆ ಅವರನ್ನು ದೇಶಭಕ್ತ ಎಂದು ಬಿಂಬಿಸುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಗಾಂಧಿಚೌಕ್‌ನಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ ಮಾತನಾಡಿ, ಬಿಜೆಪಿಯ ಕೆಲ ನಾಯಕರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಡೋಂಗಿ ದೇಶ ಭಕ್ತಿ ಹೊಂದಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗೋದ್ರಾ ಹತ್ಯಾಕಾಂಡದಲ್ಲಿ ಸೆರೆಮನೆ ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಲೋಕಸಭೆಗೆ ಸ್ಪರ್ಧಿಸಿರುವ ಸಾದ್ವಿ ಪ್ರಜ್ಞಾಸಿಂಗ್ ಅವರು ನಾಥುರಾಮ್ ಗೋಡ್ಸೆ ಅವರನ್ನು ಅಪ್ಪಟ ದೇಶ ಭಕ್ತ ಎಂದು ಹೇಳಿಕೆ ನೀಡಿರುವುದು ಖಂಡನಾರ್ಹ. ಈ ಹಿಂದೆಯೂ ಅವರು ಗಾಂಧೀಜಿ ಅವರನ್ನು ಬ್ರಿಟೀಷರ ಏಜೆಂಟ್ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಪ್ರಧಾನಿ ಮೋದಿ ಅವರು ಮೌನವಹಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಸಂಸದ ನಳೀನ ಕುಮಾರ ಕಟೀಲ ಕೂಡ ಮಹಾತ್ಮ ಗಾಂಧಿ, ರಾಜೀವ್‌ಗಾಂಧಿ ಅವರನ್ನು ಟೀಕಿಸಿದ್ದಾರೆ. ಬಿಜೆಪಿ ನಾಯಕರಿಗೆ ನೈತಿಕತೆವಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಣೆಗೊಳಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತೆ ರೇಷ್ಮಾ ಪಡೆಕನೂರ ಅವರ ಕೊಲೆ ಖಂಡಿಸಿ ಮೌನಾಚರಣೆ ಮಾಡಲಾಯಿತು. ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಕೆ.ಎ್.ಅಂಕಲಗಿ, ಚಾಂದಸಾಬ ಗಡಗಲಾವ, ಡಾ.ಗಂಗಾಧರ ಸಂಬಣ್ಣಿ, ವಿದ್ಯಾವತಿ ಅಂಕಲಗಿ, ಜಮೀರ್ ಅಹ್ಮದ್ ಬಾಗಲಕೋಟ, ಸಾಹೇಬಗೌಡ ಬಿರಾದಾರ, ವಿಜಯಕುಮಾರ ಘಾಟಗೆ, ವಸಂತ ಹೊನಮೊಡೆ, ಚನ್ನಬಸಪ್ಪ ನಂದರಗಿ, ಬಿ.ಎಸ್.ಬ್ಯಾಳಿ, ಅಕ್ಬರ್ ನಾಯಕ್, ಮಹ್ಮದ್‌ಯಾಸೀನ್ ಬಕ್ಷೀ, ಇಲಿಯಾಸ ಅಹ್ಮದ್ ಸಿದ್ದಿಕಿ, ದಾವಲಸಾಬ ಬಾಗವಾನ, ಅಲ್ಲಾಭಕ್ಷ ಬಾಗಲಕೋಟ, ಬಾಬು ಯಾಳವಾರ, ತಾಜುದ್ದೀನ ಖಲೀ, ಎಂ.ಎ.ಬಕ್ಷೀ, ಶ್ರೀಕಾಂತ ಕಟ್ಟಿಮನಿ, ನಿಂಗಪ್ಪ ಸಂಗಾಪುರ ಇನ್ನಿತರರಿದ್ದರು.

Leave a Reply

Your email address will not be published. Required fields are marked *