More

    ಮಹಾತ್ಮ ಗಾಂಧಿಯವರ ಚಿಂತನೆಗಳು ನಮಗೆ ದಾರಿದೀಪ: ನರೇಂದ್ರ ಮೋದಿ

    ನವದೆಹಲಿ: ಮಹಾತ್ಮ ಗಾಂಧೀಜಿ ಅವರ ಆಲೋಚನೆಗಳು ಇಡೀ ಮಾನವಕುಲವನ್ನು ಏಕತೆ ಹಾಗೂ ಸಹಾನುಭೂತಿಯೆಡೆಗೆ ಪ್ರೇರೇಪಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

    154ನೇ ಗಾಂಧಿ ಜಯಂತಿಯ ಅಂಗವಾಗಿ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದ ಮೋದಿಯವರು, ಗಾಂಧೀಜಿ ನಡೆ ಮತ್ತು ಅವರ ಮಾತುಗಳು ನಮ್ಮನ್ನು ಸರಿದಾರಿಯಲ್ಲಿ ಮುನ್ನಡೆಸುತ್ತಲೇ ಇರುತ್ತವೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ, ಎಲ್ಲರೂ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳಲಿ ಎಂದು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಅಹಿಂಸೆ ಮತ್ತು ಸಹಿಷ್ಣುತೆಯ ಮೌಲ್ಯಗಳನ್ನು ಗೌರವಿಸಲು ಈ ದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಹ ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಜಿ ಸ್ಮಾರಕಕ್ಕೆ ನಮಿಸಿದರು.

    ರಾಮರಾಜ್ಯ ಮಾಡೋಣ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್​ ಮಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ನನ್ನ ನಮನಗಳು, ರಾಜ್ಯದ ಜನತೆಗೆ ಅಂತಾರಾಷ್ಟ್ರೀಯ ಅಹಿಂಸಾ ದಿನದ ಶುಭಾಶಯಗಳು, ಸತ್ಯ, ಅಹಿಂಸೆ, ಪ್ರೀತಿ ಮತ್ತು ಸ್ವಚ್ಛತೆಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ರಾಮರಾಜ್ಯ ಪರಿಕಲ್ಪನೆಯೊಂದಿಗೆ ದೇಶ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸಂಕಲ್ಪ ಮಾಡೋಣ ಎಂದಿದ್ದಾರೆ.

    ಕೇವಲ 10 ಗಂಟೆಗಳಲ್ಲಿ ದೆಹಲಿಯಿಂದ ವಡೋದರಾಗೆ ಪ್ರಯಾಣ; ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಹಂತ-2 ಇಂದು ಉದ್ಘಾಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts