ಉಪದೇಶಗಳಲ್ಲಿ ಸಾರ್ವಜನಿಕ ಮೌಲ್ಯ : ಬೆಳ್ತಂಗಡಿ ಬಸದಿಯಲ್ಲಿ ಮಿತ್ರಸೇನ ಜೈನ್ ಬಣ್ಣನೆ

New Project (4)
Published on

ಬೆಳ್ತಂಗಡಿ: ಅಹಿಂಸೆ, ಅನೇಕಾಂತವಾದ, ಬದುಕು ಮತ್ತು ಬದುಕಲು ಬಿಡು ಮೊದಲಾದ ಉಪದೇಶಗಳು ಸಾರ್ವಜನಿಕ ಮೌಲ್ಯ ಹೊಂದಿವೆ ಎಂದು ಮಹಾವೀರ ತೀರ್ಥಂಕರ ಅಳದಂಗಡಿ ಮಿತ್ರಸೇನ ಜೈನ್ ಹೇಳಿದರು.

ಜೈನಪೇಟೆ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆಯಲ್ಲಿ ಭಗವಾನ್ ಮಹಾವೀರ ತೀರ್ಥಂಕರರ ಜೀವನಸಾಧನೆ ಬಗ್ಗೆ ಉಪನ್ಯಾಸ ನೀಡಿದರು.

ಸಕಲ ಪ್ರಾಣಿಪಕ್ಷಿಗಳಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಮಹಾವೀರ ಬೋಧಿಸಿದ ತತ್ವಗಳಿಂದ ವಿಶ್ವಶಾಂತಿಯೊಂದಿಗೆ ಸುಖಶಾಂತಿ, ನೆಮ್ಮದಿ ಜೀವನ ಸಾಧ್ಯ ಎಂದರು.

ಬಸದಿ ಆಡಳಿತ ಮೊಕ್ತೇಸರ ಕೆ.ಜಯವರ್ಮರಾಜ ಬಳ್ಳಾಲ್ ನೇತೃತ್ವದಲ್ಲಿ ಪ್ರಧಾನ ಅರ್ಚಕ ಕೆ.ಜಯರಾಜ ಇಂದ್ರ ಮತ್ತು ಸಹಪುರೋಹಿತರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಶಾಂತಿಚಕ್ರ ಆರಾಧನೆಯಲ್ಲಿ 26 ಮಂದಿ ಶ್ರಾವಕ, ಶ್ರಾವಕಿಯರು ಭಾಗವಹಿಸಿದ್ದರು. ಡಾ.ಕೆ.ಜೀವಂಧರ ಬಳ್ಳಾಲ್, ಕೆ.ರಾಜವರ್ಮ ಬಳ್ಳಾಲ್, ಬೆಂಗಳೂರಿನ ವಕೀಲ ಕೆ.ಬಿ.ಯುವರಾಜ ಬಳ್ಳಾಲ್, ವಿಜಯ ಬ್ಯಾಂಕ್ ನಿವೃತ್ತ ಪ್ರಬಂಧಕ ಎಂ.ಜಿನರಾಜ ಶೆಟ್ಟಿ, ಸುಮತಿ ಕೆ.ಆರ್.ಬಳ್ಳಾಲ್ತಿ, ವಿನಯಾ ಜೆ. ಬಳ್ಳಾಲ್, ಡಾ.ಪ್ರಿಯಾ ಬಳ್ಳಾಲ್ ಮತ್ತು ಮಣಿವಾಲ ಬಳ್ಳಾಲ್ ಉಪಸ್ಥಿತರಿದ್ದರು.

108 ಕಲಶಗಳಿಂದ ಮಹಾಭಿಷೇಕ

ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಅಂಗವಾಗಿ ಗುರುವಾರ ತೋರಣ ಮುಹೂರ್ತ, ವಿವಾನಶುದ್ಧಿ, ಭಗವಾನ್ ಮಹಾವೀರ ಸ್ವಾಮಿಗೆ ನವಕಲಾಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ 108 ಕಲಶಗಳಿಂದ ಮಹಾಭಿಷೇಕ, ಪದ್ಮಾವತಿ ಅಮ್ಮನವರಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net