ವಿಶ್ವಕ್ಕೆ ಶಾಂತಿ ಮಾರ್ಗ ತೋರಿದ ಮಹಾವೀರ

ಯಾದಗಿರಿ: ಭಗವಾನ ಶ್ರೀ ಮಹಾವೀರ ದೇಶಕ್ಕಷ್ಟೇ ಅಲ್ಲದೆ, ಇಡೀ ವಿಶ್ವಕ್ಕೆ ಸತ್ಯ ಮತ್ತು ಶಾಂತಿ ಮಾರ್ಗ ತೋರಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯುವ ದೃಢ ಸಂಕಲ್ಪ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ತಿಳಿಸಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡ ಭಗವಾನ ಮಹಾವೀರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಭಗವಾನ ಮಹಾವೀರ ಜಯಂತಿ ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಎಂದರು.

ಭಗವಾನ ಮಹಾವೀರರ ಶಾಂತಿ ಮತ್ತು ಅಹಿಂಸೆ ಮಾರ್ಗದಲ್ಲಿ ನಡೆಯುತ್ತಿರುವ ಜೈನ ಸಮಾಜವು ಶಾಂತಿಪ್ರಿಯವಾಗಿದೆ. ಎಲ್ಲ ಸಮಾಜಗಳ ಏಳ್ಗೆಯ ಬಗ್ಗೆ ಕಳಕಳಿ ಹೊಂದಿದೆ. ಈ ನಿಟ್ಟಿನಲ್ಲಿ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.

ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಂದೇನವಾಜ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪೂಣರ್ಿಮಾ ಚೂರಿ, ಭಾವೈಕ್ಯತಾ ಸಮಿತಿಯ ಬಾಬು ದೋಖಾ ಅವರು ಇದ್ದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಲಿಂಗೇರಿ ಸ್ಟೇಷನ್ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಹಾಗೂ ಕಲಾವಿದ ವಿಥೇಶ್ಕುಮಾರ ನಾಡಗೀತೆ ಹಾಡಿದರು. ಶ್ರೀನಿವಾಸ ಸಣ್ಣಸಂಬರ ತಬಲಾ ಸಾಥ್ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಉಪನ್ಯಾಸಕಿ ಡಾ. ಜ್ಯೋತಿಲತಾ ತಡಿಬಿಡಿಮಠ ನಿರೂಪಣೆ ಮಾಡಿದರು.

Leave a Reply

Your email address will not be published. Required fields are marked *