ವಾರಾಂತ್ಯಕ್ಕೆ ಭರ್ಜರಿ ಕಲೆಕ್ಷನ್​ ಕಂಡ ಮಹೇಶ್​ ಬಾಬು ಚಿತ್ರ! ಒಟ್ಟು ಗಳಿಸಿದ್ದೆಷ್ಟು? ಇಲ್ಲಿದೆ ವಿವರ

ವಿಜಯವಾಣಿ - 2024-01-19T102451.744
Published on

ಆಂಧ್ರಪ್ರದೇಶ: ಟಾಲಿವುಡ್​ ಪ್ರಿನ್ಸ್​ ಮಹೇಶ್ ಬಾಬು ಮತ್ತು ಸ್ಯಾಂಡಲ್​ವುಡ್​ನ ಕಿಸ್ ಬೆಡಗಿ, ನಟಿ ಶ್ರೀಲೀಲಾ ಮುಖ್ಯಭೂಮಿಕೆಯಲ್ಲಿರುವ ‘ಗುಂಟೂರು ಕಾರಂ’ ಇದೇ ಜ.12ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿದ್ದು, ರಿಲೀಸ್ ಆದ ಮೊದಲ ದಿನವೇ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಜತೆಗೆ ಕಲೆಕ್ಷನ್​ನಲ್ಲಿಯೂ ಉತ್ತಮ ಆರಂಭ ದೊರಕಿತು. ಇದೀಗ ಮೊದಲ ವಾರಾಂತ್ಯಕ್ಕೆ ತಲುಪಿರುವ ಚಿತ್ರ ಗಳಿಸಿದ ಒಟ್ಟು ಮೊತ್ತ ಎಷ್ಟು ಎಂಬುದರ ವಿವರ ಹೀಗಿದೆ ನೋಡಿ.

ಸುಮಾರು 200 ಕೋಟಿ ರೂ.ಗಳ ಬೃಹತ್ ಬಜೆಟ್‌ನಲ್ಲಿ ನಿರ್ಮಾಣಗೊಂಡ ‘ಗುಂಟೂರು ಕಾರಂ’ ಬಿಡುಗಡೆಗೂ ಮೊದಲೇ ಟ್ರೇಲರ್, ಟೀಸರ್​ ಮೂಲಕ ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ಭರವಸೆ ಮೂಡಿಸಿತ್ತು. ಜಾಗತಿಕವಾಗಿ ಸುಮಾರು 2000 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ಲಭಿಸುತ್ತಿವೆ.

ಗುಂಟೂರು ಕಾರಂ ಬಿಡುಗಡೆಗೊಂಡು ಇಂದಿಗೆ ಒಂದು ವಾರ ಕಳೆದಿದ್ದು, ವಾರಾಂತ್ಯಕ್ಕೆ ಸಿನಿಮಾ ಜಾಗತಿಕ 212 ಕೋಟಿ ರೂ. ಗಳಿಸಿದೆ ಎಂದು ಸಿನಿ ಮೂಲಗಳು ತಿಳಿಸಿವೆ. ಈ ವಾರಾಂತ್ಯದಲ್ಲಿ ಚಿತ್ರ ಮತ್ತಷ್ಟು ಕಲೆಕ್ಷನ್ ಮಾಡಬಹುದು ಎಂಬ ಲೆಕ್ಕಾಚಾರಗಳು ಸದ್ಯ ಟಾಲಿವುಡ್ ಅಂಗಳದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಗುಂಟೂರು ಕಾರಂ ಚಿತ್ರದಲ್ಲಿ ಸ್ಯಾಂಡಲ್​ವುಡ್​ ಬ್ಯೂಟಿ ಶ್ರೀಲೀಲಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಮೀನಾಕ್ಷಿ ಚೌಧರಿ, ರಮ್ಯಾ ಕೃಷ್ಣನ್, ಪ್ರಕಾಶ್ ರಾಜ್, ಈಶ್ವರಿ ರಾವ್, ವೆನ್ನೆಲ ಕಿಶೋರ್ ಮುಂತಾದವರ ತಾರಾಗಣವಿದೆ. ಚಿತ್ರಕ್ಕೆ ಥಮನ್ ಅವರ ಸಂಗೀತವಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net