More

    ಬಿಎಂಆರ್‌ಸಿಎಲ್‌ಗೆ ನೂತನ ಎಂಡಿ ನೇಮಿಸಿದ ಕೇಂದ್ರ ಸರ್ಕಾರ

    ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌)ಕ್ಕೆ ಪೂರ್ಣಪ್ರಮಾಣದಲ್ಲಿ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್​ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಗುರುವಾರ ಈ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರವನ್ನು ಬರೆದಿದ್ದಾರೆ. ಮಹೇಶ್ವರ್ ರಾವ್​ ಅವರನ್ನು ಬಿಎಂಆರ್​ಸಿಎಲ್​ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

    ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರನ್ನು ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ ರಾಜ್ಯ ಸರ್ಕಾಋ ಅವರನ್ನು ವರ್ಗಾವಣೆ ಮಾಡುವಂತಿಲ್ಲ ಅಥವಾ ತೆಗೆದು ಹಾಕುವಂತಿಲ್ಲ. ಅಲ್ಲದೇ ಕರ್ನಾಟಕ ಸರ್ಕಾರ ವ್ಯವಸ್ಥಾಪಕ ನಿರ್ದೇಶಕರಿಗೆ ಯಾವುದೇ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಒಪ್ಪಿಗೆ ಇಲ್ಲದೇ ನೀಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

    ಇತ್ತೀಚಿಗೆ ಸಂಸದ ತೇಜಸ್ವಿ ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts