More

    ಮಕ್ಕಳ ರಕ್ಷಣಾ ಸಮಿತಿ ಸಭೆಗಳು ಪರಿಣಾಮಕಾರಿ ಜರುಗಿಸಲು ಸೂಚನೆ

    ಗದಗ:  ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ಸಭೆಗಳು ಪರಿಣಾಮಕಾರಿಯಾಗಿ ಜರುಗಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.  

    ಜಿಲ್ಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ  ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳು ಸಮಾಜದಲ್ಲಿ ಮುಂದೆ ಸತ್ಪ್ರಜೆಗಳಾಗಿ ಆರೋಗ್ಯಯುತ ಜೀವನ ನಡೆಸಬೇಕು. ಈ ದೃಷ್ಟಿಯಲ್ಲಿ ಮಕ್ಕಳ ರಕ್ಷಣಾ ಘಟಕ ತನ್ನ ಕಾರ್ಯ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಜರುಗಿಸಬೇಕು ಎಂದು ಹೇಳಿದರು.

    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಅವರು ಮಾತನಾಡಿ,  ರಾಷ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ಇವರ ಮಾರ್ಗಸೂಚಿಯನ್ವಯ   ಬಾಲಕಾರ್ಮಿಕರನ್ನು ಹಾಗೂ ಕಿಶೋರಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ  ನವೆಂಬರ್ 20 ರಿಂದ ಡಿಸೆಂಬರ್ 10 ರವರೆಗೆ   ನೋಡಲ್ ಅಧಿಕಾರಿಗಳನ್ನೊಳಗೊಂಡಂತೆ ರಕ್ಷಣಾ ಕಾರ್ಯಚರಣೆ ನಡೆಸಲು ತಿಳಿಸಲಾಗಿದೆ. ಇಲಾಖಾ ಅಧಿಕಾರಿಗಳು ಸಮರ್ಪಕವಾಗಿ  ರಕ್ಷಣಾ ಕಾರ್ಯಾಚರಣೆ ನಡೆಸಲು  ಸೂಚಿಸಿದರು.  

    ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಧಾ ಮಣ್ಣೂರ ಅವರು ಮಾತನಾಡಿ, ಗ್ರಾಮ ಹಾಗೂ ತಾಲೂಕು ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ಸಭೆಗಳನ್ನು ನಡೆಸಲಾಗುತ್ತಿದ್ದು ಪ್ರತಿ ಸಭೆಯಲ್ಲಿ ಬಾಲಕಾರ್ಮಿಕ, ಬಿಕ್ಷಾಟನೆ, ಪೋಕ್ಸೋ, ಬಾಲ್ಯ ವಿವಾಹ ಇನ್ನಿತರ ಮಕ್ಕಳ ಸಮಸ್ಯೆಗಳ ಕುರಿತು ಹಾಗೂ  ಐ.ಸಿ.ಪಿ.ಎಸ್. ಯೋಜನೆಗಳ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ. ದತ್ತು ಕಾರ್ಯಕ್ರಮದ ಕುರಿತು ಸಭೆಯಲ್ಲಿ ವಿವರಣೆ ನೀಡಿದ ಅವರು ಉಪಕಾರ ಯೋಜನೆಯಡಿ 2023-24 ನೇ ಸಾಲಿನಲ್ಲಿ 13 ಮಕ್ಕಳಿಗೆ 5000/- ರೂಗಳಂತೆ 3 ತಿಂಗಳಿಗೆ ಡಿಬಿಟಿ ಮೂಲಕ  195000 /- ಗಳನ್ನು ಡಿಬಿಟಿ ಮೂಲಕ ಮಕ್ಕಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಸಭೆಯಲ್ಲಿ 1098 ಮಕ್ಕಳ ಸಹಾಯವಾಣಿ ಪುನರ್ ಸ್ಥಾಪನೆ,   ಮಕ್ಕಳ ವಿಶೇಷ ಗ್ರಾಮ ಸಭೆ , ದತ್ತು ಮಾಸಾಚರಣೆ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.
    ಸಭೆಯಲ್ಲಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟಪ್ಪನವರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ, ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು , ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts