More

    ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ; ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ

    ನವದೆಹಲಿ: ಬಿಜೆಪಿ ಸಂಸದ ನಿಶಿಕಾಂತ್​ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮುಂದಿನ 24 ಘಂಟೆಯೊಳಗೆ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಕಠೀಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್​ ಸಂಸದೆ ಮಹುವಾ ಮೊಯಿತ್ರಾ ಆಗ್ರಹಿಸಿದ್ದಾರೆ.

    ತಮ್ಮ ವಿರುದ್ಧ ಮಾಡಲಾಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮುಂದಿನ 24 ಘಂಟೆಯೊಳಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಬಿಜೆಪಿ ಸಂಸದನಿಗೆ ಮಹುವಾ ಮೊಯಿತ್ರಾ ಲೀಗಲ್​ ನೋಟಿಸ್​ ಕಳುಹಿಸಿದ್ದಾರೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.

    ಈ ಕುರಿತು ಪ್ರತಿಕ್ರಿಯಿಸಿರುವ ಸಂಸದೆ ಮಹುವಾ ಮೊಯಿತ್ರಾ ನನ್ನ ವಿರುದ್ಧ ಬಿಜೆಪಿಯವರು ಮಾಡಿರುವ ಅಷ್ಟು ಆರೋಪಗಳು ಸುಳ್ಳು. ಸಿಬಿಐ ಸೇರಿದಂತೆ ಯಾವುದೇ ತನಿಖಾ ಸಂಸ್ಥೆ ವಿಚಾರಣೆ ನಡೆಸಿದ್ದರು ನಾನು ಎದುರಿಸಲು ಸಿದ್ದಳಿದ್ದೇನೆ. ನನ್ನ ಮೇಲೆ ಮಾಡಿರುವ ಆರೋಪಗಳು ನಿರಾಧಾರವಾಗಿದ್ದು, ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.

    ಇದನ್ನೂ ಓದಿ: ಮಣಿಪುರಕ್ಕಿಂತ ಪ್ರಧಾನಿ ಮೋದಿ ಇಸ್ರೇಲ್ ಬಗ್ಗೆಯೇ ಹೆಚ್ಚು ಕಾಳಜಿ ವಹಿಸಿದ್ದಾರೆ: ರಾಹುಲ್ ಗಾಂಧಿ

    ಪ್ರಕರಣದ ಹಿನ್ನಲೆ

    ಲೋಕಸಭೆ ಅಧಿವೇಶನದಲ್ಲಿ ಮಹುವಾ ಮೊಯಿತ್ರಾ ಹಾಗೂ ತೃಣಮೂಲ ಪಕ್ಷದ ಸಂಸದರು ಪ್ರತಿ ಅಧಿವೇಶನದಲ್ಲೂ ಅದಾನಿ ವಿಚಾರವಾಗಿ ಕೂಗಾಡಿ ಕಲಾಪವನ್ನು ವ್ಯರ್ಥ ಮಾಡುತ್ತಾರೆ. ಪ್ರತಿಬಾರಿಯೂ ಈಗೇಕೆ ಆಗುತ್ತದೆ ಎಂದು ವಿಚಾರಿಸಿದಾಗ ಅವರು ಹೀರಾನಂದಿನಿ ಸಂಸ್ಥೆಯ ಮಾಲೀಕರಿಂದ ಲಂಚ ಪಡೆದು ಅವರು ಹೇಳಿದ ಹಾಗೆ ಇವರು ಅಧಿವೇಶನದಲ್ಲಿ ಪ್ರಶ್ನೆಗಳನ್ನು ಕೇಳುತ್ತಾರೆ ಎಂದು ತಿಳಿದು ಬಂದಿತ್ತು.

    2019-23ರ ವರೆಗಿನ ಅಧಿವೇಶನದಲ್ಲಿ ಸಂಸದೆ ಮಹುವಾ ಅವರು 61 ಪ್ರಶ್ನೆಗಳನ್ನು ಕೇಳಿದ್ದು, ಈ ಪೈಕಿ 50 ಪ್ರಶ್ನೆಗಳು ಹೀರಾನಂದಿನಿ ಹಾಗೂ ಅದಾನಿಗೆ ಸಂಬಂಧಿಸಿದ ಪ್ರಶ್ನೆಗಳಾಗಿವೆ. ಇದಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ಈಗಾಗಲೇ ಸಿಬಿಐಗೆ ದೂರು ನೀಡಿದ್ದು, ಲೋಕಸಭೆ ವತಿಯಿಂದ ವಿಶೇಷ ಸಮಿತಿ ಒಂದನ್ನು ರಚಿಸಿ ತನಿಖೆ ನಡೆಸಬೇಕು ಎಂದು ಲೋಸಕಭೆ ಸ್ಪೀಕರ್​ಗೆ ಬರೆದ ಪತ್ರದಲ್ಲಿ ಸಂಸದ ನಿಶಿಕಾಂತ್ ದುಬೆ ಎಂದು ಆಗ್ರಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts