More

    ಮೈಲಾರಲಿಂಗೇಶ್ವರ ಕಾರ್ಣಿಕ ವಾಣಿ; ಏನು ಈ ಸಲದ ಭವಿಷ್ಯ?

    ಹಾವೇರಿ: ಎಂದಿನಂತೆ ಈ ಸಲವೂ ಸುಕ್ಷೇತ್ರ ಮೈಲಾರಲಿಂಗೇಶ್ವರದಲ್ಲಿ ಕಾರ್ಣಿಕ ನುಡಿ ಕೇಳಿ ಬಂದಿದ್ದು, ರಾಜ್ಯದ ಬಹಳಷ್ಟು ಬೆಳವಣಿಗೆಗಳ ಕುರಿತಂತೆ ಅದು ಭವಿಷ್ಯ ತಿಳಿಸಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ವಾರ್ಷಿಕೋತ್ಸವದಲ್ಲಿ ಗೊರವಯ್ಯ ರಾಮಪ್ಪ, ‘ಮಳೆ ಬೆಳೆ ಸಂಪಾಯಿತಲೆ ಪರಾಕ್..’ ಎಂದು ಪ್ರಸಕ್ತ ವರ್ಷದ ಕಾರ್ಣಿಕ ನುಡಿದಿದ್ದಾರೆ.

    ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿಯನ್ನು ಅಲ್ಲಿನ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಣೆ ಮಾಡಿದ್ದು, ಭವಿಷ್ಯವನ್ನು ವಿವರಿಸಿದ್ದಾರೆ. ಮೈಲಾರದ ಡೆಂಕಣಮರಡಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರೈತರು ಈ ವರ್ಷ ಸಂಪದ್ಭರಿತರಾಗಿ ಇರುತ್ತಾರೆ. ರೈತರ ಎಲ್ಲ ಕಷ್ಟಗಳು ದೂರವಾಗುತ್ತವೆ. ಮಳೆ ಬೆಳೆ ಸಮೃದ್ಧವಾಗಿ ಆಗುತ್ತವೆ. ಇದರ ಜೊತೆಗೆ ಯಾವ ರೋಗ ರುಜಿನ ಇಲ್ಲದೆ ಸಂತೋಷವಾಗಿ ಜೀವನ ಕಳೆಯುತ್ತೇವೆ ಎಂದು ವಿಶ್ಲೇಷಿದ್ದಾರೆ.

    ಇನ್ನು ಇದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡಿದ ಅವರು, ನೈಋತ್ಯ ಭಾಗದ ಪ್ರಭಾವಿ ಮುಖಂಡ ಮುಂದೆ ರಾಜ್ಯವನ್ನಾಳುತ್ತಾನೆ. ಕುಬೇರನ ಸ್ಥಾನದಲ್ಲಿರುವ ವ್ಯಕ್ತಿ ಮುಂದಿನ ರಾಜಕಾರಣ ಮಾಡುತ್ತಾನೆ. ಅವರ ಅವಧಿಯಲ್ಲಿ ರಾಜ್ಯದ ಜನರು ಸಂಪನ್ನರಾಗುತ್ತಾರೆ. ಸುಖ-ಶಾಂತಿ ಸಂಪತ್ತು ನೀಡುವ ರಾಜಕಾರಣಿ ಬರುತ್ತಾನೆ. ಮುಂಬರುವ ಸರ್ಕಾರ ಐದು ವರ್ಷಗಳ ಕಾಲ ಸಂಪದ್ಭರಿತವಾಗಿ ಇರುತ್ತದೆ ಎಂದು ವಿವರಿಸಿದ್ದಾರೆ.

    ಅಪ್ಪು ಜನ್ಮದಿನದಂದು ‘ಜೇಮ್ಸ್​’ ಉತ್ಸವ; 31 ಕಟೌಟ್ಸ್​, ಹೆಲಿಕಾಪ್ಟರ್​​ನಲ್ಲಿ ಹೂಮಳೆ; ಇನ್ನೇನಿರಲಿದೆ ಅಲ್ಲಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts