More

    ಪುರುಷ ಕಾರ್ಮಿಕರಿಗೂ ಸ್ತನ ಕ್ಯಾನ್ಸರ್‌ ಪರೀಕ್ಷೆ ಹೆಸರಲ್ಲಿ ಅಕ್ರಮ! ಮುಖ್ಯ ಆರೋಪಿಯೇ ತನಿಖಾಧಿಕಾರಿ

    ತುಮಕೂರು: ಪೌರ ಕಾರ್ಮಿಕರ ಸಮಗ್ರ ಆರೋಗ್ಯ ತಪಾಸಣೆಯಲ್ಲಿ ನಡೆದಿದ್ದ ಅಕ್ರಮ ಪ್ರಕರಣದ ತನಿಖೆಯಲ್ಲಿ ಮುಖ್ಯ ಆರೋಪಿಯೇ ತನಿಖಾಧಿಕಾರಿ ಆಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

    ಪುರುಷ ಕಾರ್ಮಿಕರಿಗೂ ಸ್ತನ ಕ್ಯಾನ್ಸರ್‌ ಪರೀಕ್ಷೆ ನಡೆಸಿರುವುದಾಗಿ ಬಿಲ್‌ ಸೃಷ್ಟಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ತನಿಖೆಗೆ ತಂಡ ರಚಿಸಿದೆ. ಪ್ರಕರಣದ ಮುಖ್ಯ ಆರೋಪಿಯಾಗಿರುವ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್‌ ಬಿ.ಕೆ.ಆಶಾ ಎಂಬುವರನ್ನೇ ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

    ಇದನ್ನೂ ಓದಿ: ದುಪ್ಪಟ್ಟ ಹಾಕದವರೇ ಟಾರ್ಗೆಟ್​: ಸಿಕ್ಕಿಬಿದ್ದ ಸೈಕೋ ಶರವಣನ್​, ನಿಟ್ಟುಸಿರು ಬಿಟ್ಟ ಮಹಿಳೆಯರು

    ಆರೋಪಿ ಆಶಾ, ತನಿಖಾ ತಂಡದಲ್ಲಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ತನಿಖೆ ಎಷ್ಟು ಪ್ರಾಮಾಣಿಕವಾಗಿ ನಡೆಯುತ್ತದೆ? ಇದು ಕಳ್ಳರ ಕೈಗೆ ಮನೆ ಬೀಗ ಕೊಟ್ಟಂತಾಗಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. (ದಿಗ್ವಿಜಯ ನ್ಯೂಸ್​)

    2 ತಿಂಗಳಲ್ಲಿ ಮೂರು ಮರಿಗಳು ಸೇರಿ 6 ಚೀತಾ ಸಾವು: ಕೇಂದ್ರ ಸರ್ಕಾರ ಕೊಟ್ಟ ಉತ್ತರ ಹೀಗಿದೆ….

    ಸೇತುವೆಯಿಂದ ಕಣಿವೆಗೆ ಬಿದ್ದ ಬಸ್​: 10 ಮಂದಿ ದುರಂತ ಸಾವು, 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts