More

    ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ

    ಕೊಪ್ಪಳ: ಜಿಲ್ಲೆಯಲ್ಲಿ ಮೆಕ್ಕೆಜೋಳ, ಸಜ್ಜೆ ಕಟಾವು ನಡೆದಿದೆ. ಮಾರುಕಟ್ಟೆಯಲ್ಲಿ ದರ ಗಣನೀಯವಾಗಿ ಕುಸಿದಿದ್ದು, ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ರೈತರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

    ಈ ವರ್ಷ ಉತ್ತಮ ಮಳೆಯಾದ ಕಾರಣ ಬೆಳೆಗಳು ಚೆನ್ನಾಗಿ ಬಂದಿವೆ. ಹೆಚ್ಚುವರಿ ಮಳೆಯಿಂದ ಬೆಳೆಗಳ ಕಟಾವಿಗೆ ತೊಂದರೆಯಾಗುತ್ತಿದೆ. ಆದರೆ, ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 700-800ರೂ. ಹಾಗೂ ಸಜ್ಜೆ ಕ್ವಿಂಟಾಲ್‌ಗೆ 900-1000ರೂ. ದರವಿದೆ. ಇದರಿಂದ ನಮಗೆ ನಷ್ಟ ಉಂಟಾಗುತ್ತಿದೆ. ಆ.28ರಂದು ಜಿಲ್ಲಾಧಿಕಾರಿಗಳಿಗೆ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ, ಸಜ್ಜೆ ಹಾಗೂ ನವಣೆ ಖರೀದಿ ಕೇಂದ್ರ ಆರಂಭಿಸುವಂತೆ ಮನವಿ ಮಾಡಲಾಗಿದೆ. ವಾರದೊಳಗೆ ಕೇಂದ್ರ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ, ಒಂದು ತಿಂಗಳಾದರೂ ಕೇಂದ್ರ ಆರಂಭಿಸಿಲ್ಲವೆಂದು ರೈತರು ದೂರಿದರು.

    ವಾರದೊಳಗೆ ಖರೀದಿ ಕೇಂದ್ರ ಆರಂಭಿಸಬೇಕು. ಮಾರುಕಟ್ಟೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯ ತಡೆಯಬೇಕು. ಕೂಡಲೇ ಕೇಂದ್ರ ಆರಂಭಿಸಬೇಕು. ಇಲ್ಲದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆಂದು ಎಚ್ಚರಿಸಿದರು. ರೈತ ಮುಖಂಡರಾದ ನಜೀರ್‌ಸಾಬ್ ಮೂಲಿಮನಿ, ಹನುಮಂತಪ್ಪ ಹೊಳೆಯಾಚೆ, ಇಸ್ಮಾಯಿಲ್ ನಾಲಬಂದ್, ಚಂದಾಹುಸೇನ್, ಗಾಳೆಪ್ಪ ಪೂಜಾರ, ಗಣೇಶರಡ್ಡಿ, ಶರಣಬಸವ, ಭರಮಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts