ತಿರುವಿನಲ್ಲಿ ಮಗುಚಿಬಿದ್ದ Bus; 7 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

Bus Accident
Published on

ರಾಂಚಿ: ತಿರುವು ತೆಗೆದುಕೊಳ್ಳುವಾಗ ಬಸ್​ (Bus) ಮಗುಚಿಬಿದ್ದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್​ನ ಹಜಾರಿಬಾಗ್​ನಲ್ಲಿ ನಡೆದಿದೆ.

ಜಾರ್ಖಂಡ್‌ನ ಬರ್ಕತ್ತಾದ ಗೋರ್ಹರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಷಟ್ಪಥ ರಸ್ತೆ ಕಾಮಗಾರಿ ಅಪೂರ್ಣಗೊಂಡಿದ್ದರ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಧಿಕಾರಿಗಳು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. 

ಈ ಕುರಿತು ಮಾತನಾಡಿರುವ ಹಜಾರಿಬಾಗ್ ಎಸ್ಪಿ ಅರವಿಂದ್ ಕುಮಾರ್ ಸಿಂಗ್, ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಗೋರ್ಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಏಳು ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಇನ್ನಷ್ಟು ಮಂದಿ ಬಸ್ಸಿನಡಿ (Bus) ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net