blank

Champions Trophy ಸ್ವರೂಪದಲ್ಲಿ ಪ್ರಮುಖ ಬದಲಾವಣೆ? ಭಾರತ-ಪಾಕ್​ ವಿವಾದದ ನಡುವೆಯೇ ಕೇಳಿ ಬಂತು ಹೊಸ ವಿಚಾರ

Champions Trophy

ನವದೆಹಲಿ: ಚಾಂಪಿಯನ್ಸ್​ ಟ್ರೋಫಿಗೆ (Champions Trophy) ಸಂಬಂಧಿಸಿದ ಬಿಕ್ಕಟ್ಟು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಬಿಸಿಸಿಐ ಹಾಗೂ ಪಿಸಿಬಿ ನಡುವಿನ ಕಿತ್ತಾಟದಿಂದಾಗಿ ಐಸಿಸಿ ಈವರೆಗೂ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಭದ್ರತೆಯ ಕಾರಣ ನೀಡಿ ಭಾರತ (Team India) ಹೈಬ್ರಿಡ್​ ಮಾದರಿಯಲ್ಲಿ ಟೂರ್ನಿ ನಡೆಸುವಂತೆ ಪಟ್ಟು ಹಿಡಿದಿದ್ದು, ಪಾಕಿಸ್ತಾನ (Pakistan) ತನ್ನ ಹೇಳಿಕೆಗಳನ್ನು ಬದಲಿಸುತ್ತ ಗೊಂದಲವನ್ನ ಸೃಷ್ಟಿಸುತ್ತಿದೆ. ಇನ್ನೂ ಉಭಯ ದೇಶಗಳ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಐಸಿಸಿ ಹೈರಾಣಾಗಿದ್ದು, ಚಾಂಪಿಯನ್ಸ್​ ಟ್ರೋಫಿಗೆ (Champions Trophy) ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಒಂದು ಹೊರಬಿದ್ದಿದೆ.

2025ರ ಫೆಬ್ರವರಿ-ಮಾರ್ಚ್​​ ತಿಂಗಳಲ್ಲಿ ನಡೆಯಲಿರುವ ಚಾಂಪಿಯನ್ಸ್​ ಟ್ರೋಫಿಗೆ (Champions Trophy) ಸಂಬಂಧಿಸಿದಂತೆ ಈಗಾಗಲೇ ಐಸಿಸಿ ಸದಸ್ಯ ರಾಷ್ಟ್ರಗಳು ಒಂದು ಸುತ್ತಿನ ಸಭೆ ನಡೆಸಿದ್ದು, ಟೂರ್ನಿಗೆ ಬೇಕಾದ ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಆದರೆ, ಭಾರತ ಹಾಗೂ ಪಾಕಿಸ್ತಾನದ ನಡುವಿನ ಕಿತ್ತಾಟದಿಂದ ಟೂರ್ನಿಯು ಏಕದಿನ ಬದಲಿಗೆ ಟಿ20 ಮಾದರಿಯಲ್ಲಿ ನಡೆಸಲಾಗುತ್ತದೆ ಎಂಬ ಮಾತು ಕೇಳಿ ಬಂದಿದ್ದು, ವೇಳಾಪಟ್ಟಿ ಪ್ರಕಟ ವಿಳಂಬವೇ ಇದಕ್ಕೆಲ್ಲಾ ಪ್ರಮುಖ ಕಾರಣ ಎಂದು ಹೇಳಲಾಗಿದೆ.

ಕ್ರಿಕ್​ಬಜ್​ (Cricbuzz) ವರದಿ ಮಾಡಿರುವ ಪ್ರಕಾರ ಟೂರ್ನಿ ವೇಳಾಪಟ್ಟಿ ಬಿಡುಗಡೆಯಾಗುವುದು ವಿಳಂಬವಾಗುತ್ತಿರುವ ಕಾರಣ ಟೂರ್ನಿಯನ್ನು ಏಕದಿನ ಬದಲಿಗೆ ಟಿ20 ಮಾದರಿಯಲ್ಲಿ ನಡೆಸುವಂತೆ ಆಗ್ರಹ ಕೇಳಿ ಬಂದಿರುವುದಾಗಿ ವರದಿಯಾಗಿದೆ. ಕೆಲ ದಿನಗಳ ಹಿಂದೆ ಐಸಿಸಿ ನಡೆಸಿದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದ್ದು, ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ಟೂರ್ನಿಯನ್ನು ಏಕದಿನ ಬದಲಿಗೆ ಟಿ20 ಮಾದರಿಯಲ್ಲಿ ನಡೆಸಲಾಗುತ್ತದೆ ಎಂದು ಕ್ರಿಕ್​ಬಜ್​ ವರದಿ ಮಾಡಿದೆ.

ಆರ್ಥಿಕ ಸಂಕಷ್ಟದ ಭಯ

ಭಾರತ ತಂಡ (Team India) ಚಾಂಪಿಯನ್ಸ್ ಟ್ರೋಫಿ (Champions Trophy) ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗಲಿದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದ್ದು, ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ (Team India) ಇರುವ ಕ್ರೇಜ್​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ ಎಂಬ ನಂಬಿಕೆಯಲ್ಲಿ ಅಲ್ಲಿನ ಕ್ರಿಕೆಟ್​ ಮಂಡಳಿ ಹಾಗೂ ಸರ್ಕಾರ ಕಾದು ಕುಳಿತಿದೆ. ಅಲ್ಲದೇ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಕ್ರಿಕೆಟ್​ ಮೂಲಕ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ (PCB) ನಿರೀಕ್ಷೆಗೆ ಬಿಸಿಸಿಐ (BCCI) ಆಘಾತ ನೀಡಿದ್ದು, ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಕಡ್ಡಿ ಮರಿದಂತೆ ಹೇಳಿದೆ.

ಇದಲ್ಲದೆ ಭದ್ರತೆಯ ಕಾರಣದಿಂದಾಗಿ ಭಾರತದ ಪಂದ್ಯಗಳನ್ನು ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಸುವುದಾಗಿ ತಿಳಿಸಿದ್ದು, ಇದಕ್ಕಾಗಿ ಕ್ರೀಡಾಂಗಣದ ಪಕ್ಕದಲ್ಲಿರುವ ಐದು ಎಕರೆ ಜಮೀನನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಭಾರತದ ಆಟಗಾರರು ಹಾಗೂ ಸಿಬ್ಬಂದಿ ಉಳಿದುಕೊಳ್ಳಲು 5 ಸ್ಟಾರ್​ ಹೋಟೆಲ್​ ನಿರ್ಮಿಸುತ್ತಿರುವುದಾಗಿ ಪಿಸಿಬಿ ತಿಳಿಸಿದೆ. ಇದಲ್ಲದೆ ಭಾರತ ತಂಡ ಪಾಕಿಸ್ತಾನಕ್ಕೆ ಬರುವುದರಿಂದ ಉಭಯ ದೇಶಗಳ ನಡುವಿನ ಸಂಬಂಧ ಸ್ವಲ್ಪಮಟ್ಟಿಗೆ ಸರಿಹೋಗಬಹುದು ಎಂದು ಪಿಸಿಬಿ ಆಶಿಸಿದೆ. ಆದರೆ, ಪಾಕಿಸ್ತಾನ ಆಸೆಗೆ ಭಾರತ ತಣ್ಣೀರು ಎರಚಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.

Places of Worship Act ಅರ್ಜಿ ವಿಚಾರಣೆ ಮುಗಿಯುವವರೆಗೆ ಹೊಸ ದಾವೆಗೆ ಅವಕಾಶವಿಲ್ಲ: Supreme Court

ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲವೆಂದು ಕತ್ತು ಸೀಳಿಕೊಂಡು ಪ್ರಾಣಬಿಟ್ಟ Priest

 

Share This Article

ಈ 3 ರಾಶಿಯ ಮಹಿಳೆಯರಿಗೆ ಹಣದ ಮೇಲಿನ ಗೀಳು, ಐಷಾರಾಮಿ ಜೀವನದ ಆಸೆ ಹೆಚ್ಚು! Zodiac Signs

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಸೂರ್ಯ, ಗುರು ಗ್ರಹದಿಂದ ರೂಪುಗೊಳ್ಳಲಿದೆ ಕೇಂದ್ರ ಯೋಗ: ಈ 3 ರಾಶಿಯವರಿಗೆ ಹಣದ ಸಮಸ್ಯೆ ದೂರ! Kendra Yoga

Kendra Yoga : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ನಿಮಗೆ ಜ್ವರ ಬಂದ್ರೆ ಈ ರೀತಿ ಮಾಡ್ತೀರಾ? ಈ ವಿಷಯಗಳನ್ನು ನೀವು ಖಂಡಿತ ತಿಳಿದುಕೊಳ್ಳಲೇಬೇಕು? Fever

Fever : ದೇಹದ ಉಷ್ಣತೆಯು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾದಾಗ, ಜನರಲ್ಲಿ ಜ್ವರ ಕಾಣಿಸಿಕೊಳ್ಳುತ್ತದೆ. ಜ್ವರ ಬಂದಾಗ…