More

    ಲಖನೌ ವಿರುದ್ಧ ಡೆಲ್ಲಿಗೆ ಜಯ; IPL ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

    ಲಖನೌ: ಮಾರ್ಚ್​ 22ರಂದು ಆರಂಭವಾದ 17ನೇ ಆವೃತ್ತಿಯ ಟೂರ್ನಿಯು ದಿನದಿಂದ ದಿನಕ್ಕೆ ರೋಚಕತೆ ಸೃಷ್ಟಿಸುತ್ತಿದ್ದು, ಈಗಾಗಲೇ 26 ಪಂದ್ಯಗಳು ಮುಕ್ತಾಯಗೊಂಡಿವೆ. ಶುಕ್ರವಾರ ಇಲ್ಲಿನ ಭಾರತ ರತ್ನ ಶ್ರೀ ಅಟಲ್​ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ​ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನದ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಲಖನೌ ಸೂಪರ್​ಜೈಂಟ್ಸ್​ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ್ದು, ಪಾಯಿಂಟ್ಸ್​ ಟೇಬಲ್​ನಲ್ಲಿ ಬದಲಾವಣೆ ಆಗಿದೆ.

    ಆಡಿರುವ ಐದು ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಎರಡರಲ್ಲಿ ಸೋತಿರುವ ಲಖನೌ ಸೂಪರ್​ಜೈಂಟ್ಸ್​ ತಂಡವು ನಾಲ್ಕನೇ ಸ್ಥಾನದಲ್ಲಿದ್ದು, ರಿಷಭ್​ ಪಂತ್​ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 9ನೇ ಸ್ಥಾನದಲ್ಲಿದೆ. ಫಾಫ್​ ಡು ಪ್ಲೆಸಿಸ್​ ನೇತೃತ್ವದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 10ನೇ ಸ್ಥಾನಕ್ಕೆ ಕುಸಿದಿದೆ.

    ಉಳಿದಂತೆ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ 5 ಪಂದ್ಯಗಳನ್ನಾಡಿದ್ದು, 4 ಮ್ಯಾಚ್​ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಜಯ ಸಾಧಿಸಿ ಎರಡರಲ್ಲಿ ಸೋಲು ಕಂಡಿರುವ ಕಲ್ಕತ್ತಾ ನಯಟ್​ರೈಡರ್ಸ್​ ತಂಡವು ಎರಡನೇ ಸ್ಥಾನದಲ್ಲಿದೆ.

    ಇದನ್ನೂ ಓದಿ: ರಾಜ್ಯದ ವಿವಿಧೆಡೆ ತಂಪೆರೆದ ವರುಣ; ಕೆಲವೆಡೆ ಜನಜೀವನ ಅಸ್ತವ್ಯಸ್ತ

    ಇನ್ನು ಆಡಿರುವ ಐದು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿರುವ ಚೆನ್ನೈ ಸೂಪರ್​ಕಿಂಗ್ಸ್​ ತಂಡವು ಮೂರನೇ ಸ್ಥಾನದಲ್ಲಿದ್ದು, ಲಖನೌ ಸೂಪರ್​ಜೈಂಟ್ಸ್​ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಉಳಿದಂತೆ ಸನ್​ರೈಸರ್ಸ್​ ಹೈದರಾಬಾದ್​, ಗುಜರಾತ್​ ಟೈಟಾನ್ಸ್​, ಮುಂಬೈ ಇಂಡಿಯನ್ಸ್​, ಪಂಜಾಬ್​ ಕಿಂಗ್ಸ್​, ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡಗಳು ನಂತರದ ಸ್ಥಾನದಲ್ಲಿವೆ.

    ಆರ್​ಸಿಬಿ ತಂಡವು ಇದುವರೆಗೆ 6 ಪಂದ್ಯಗಳನ್ನಾಡಿದ್ದು, ಇದರಲ್ಲಿ 5 ಮ್ಯಾಚ್​​ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.975. ಹೀಗಾಗಿ ಮುಂಬರುವ ಪಂದ್ಯಗಳು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts