More

    ಲೋಕಸಭೆ ಚುನಾವಣೆಗೂ ಮುಂಚಿತವಾಗಿ ಕಾಂಗ್ರೆಸ್​ನಲ್ಲಿ ಮಹತ್ವದ ಬದಲಾವಣೆ; ಯುಪಿ ಉಸ್ತುವಾರಿಯಾಗಿ ಪ್ರಿಯಾಂಕ ಗಾಂಧಿ ಔಟ್

    ನವದೆಹಲಿ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ತೀವ್ರ ಹಿನ್ನಡೆಯಾಗಿದ್ದು, 2024ರ ಲೋಕಸಭೆ ಚುನಾವಣೆಗೂ ಮುನ್ನ ಪಕ್ಷ ಸಂಘಟನೆ ನಿಟ್ಟಿನಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ.

    ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಗಳನ್ನು ಬದಲಾವಣೆ ಮಾಡಿ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. ಉತ್ತರಪ್ರದೇಶದ ಉಸ್ತುವಾರಿಯಾಗಿ ನೇಮಕಗೊಂಡಿದ್ದ ಪ್ರಿಯಾಂಕ ಗಾಂಧಿ ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದ್ದು, ಅವರ ಬದಲಿಗೆ ಅವಿನಾಶ್​ ಪಾಂಡೆ ಅವರನ್ನು ನೇಮಿಸಲಾಗಿದೆ.

    ಸಚಿನ್ ಪೈಲಟ್ ಅವರನ್ನು ಛತ್ತೀಸ್​ಗಢ, ರಮೇಶ್ ಚೆನ್ನಿಥಾಲಾ ಅವರನ್ನು ಮಹಾರಾಷ್ಟ್ರ, ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಕರ್ನಾಟಕ, ದೀಪಕ್ ಬಾಬರಿಯಾ ದೆಹಲಿ ಮತ್ತು ಹರಿಯಾಣ, ಉತ್ತರಾಖಂಡದ ಉಸ್ತುವಾರಿಯಾಗಿ ಕುಮಾರಿ ಸೆಲ್ಜಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಜಿಎ ಮಿರ್, ದೀಪಾ ದಾಸ್ ಮುನ್ಷಿ ಅವರನ್ನು ಕೇರಳ, ಲಕ್ಷದ್ವೀಪ ಮತ್ತು ತೆಲಂಗಾಣದ ಉಸ್ತುವಾರಿಯಾಗಿ ಎಐಸಿಸಿ ನೇಮಿಸಿದೆ.

    ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಸಂವಹನ ಉಸ್ತುವಾರಿ ವಹಿಸಲಿದ್ದು, ಕೆ.ಸಿ.ವೇಣುಗೋಪಾಲ್ ಅವರು ಸಂಘಟನೆಗಳ ನೇತೃತ್ವ ವಹಿಸಲಿದ್ದಾರೆ. ಗುರ್ದೀಪ್​​ ಸಿಂಗ್ ಸಪ್ಪಲ್ ಆಡಳಿತವನ್ನು ನೋಡಿಕೊಳ್ಳಲಿದ್ದಾರೆ ಎಂದು ಎಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts