More

    ದೇಹದ ಸಮತೋಲನ ಕಾಪಾಡುವಲ್ಲಿ ಕ್ರೀಡೆಯ ಪಾತ್ರ ಪ್ರಮುಖ

    ಕೊಪ್ಪಳ: ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಪೂರಕ. ಮನಸ್ಸು ಮತ್ತು ದೇಹದ ಸಮತೋಲನ ನಿರ್ವಹಿಸುವಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.

    ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಕ್ರೀಡಾ ಇಲಾಖೆಯಿಂದ ಮೇಜರ್ ಧ್ಯಾನಚಂದ್ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ಕಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

    ಮೇಜರ್ ಧ್ಯಾನಚಂದ್ ದೇಶದ ಹೆಮ್ಮೆ. ಶ್ರೇಷ್ಠ ಹಾಕಿ ಪಟು. ಅವರು ಕ್ರೀಡಾಂಗಣದಲ್ಲಿದ್ದರೆ ಗೋಲ್ ಭಾರತದ ಪರವಾಗಿಯೇ ಆಗಲಿದೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸುತ್ತಿದ್ದರು. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವರ ಹೆಸರು ಅಜರಾಮರ ಎಂದರು.

    ಅವರ ಸವಿ ನೆನಪಿಗಾಗಿ ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಗುತ್ತಿದೆ. ಅವರ ಆಟದ ವೈಖರಿ ಕಂಡ ಕ್ರೀಡಾ ಪ್ರೇಮಿಗಳು ಅವರನ್ನು ‘ದಿ ಮೆಜಿಷಿಯನ್ ಆಫ್ ಹಾಕಿ’ ಎಂದು ಕರೆಯುತ್ತಿದ್ದರು. ಅವರ ಹೆಸರಿನಲ್ಲಿ ಅನೇಕ ಕ್ರೀಡಾಂಗಣ, ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

    ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ ಮಾತನಾಡಿ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಅತ್ಯವಶ್ಯ. ವಿದ್ಯಾರ್ಥಿಗಳು ಪಾಠಕ್ಕೆ ನೀಡುವ ಮಹತ್ವವನ್ನು ಕ್ರೀಡೆಗೂ ನೀಡಬೇಕೆಂದು ಕಿವಿಮಾತು ಹೇಳಿದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಬಸವರಾಜ, ಕ್ರೀಡಾ ವಸತಿ ನಿಲಯ ಅಧೀಕ್ಷಕ ನಾಗರಾಜ್, ತಾಲೂಕು ಕ್ರೀಡಾಧಿಕಾರಿ ಶರಣಬಸವ ಬಂಡಿಹಾಳ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿರುಪಾಕ್ಷಪ್ಪ ಬಾಗೋಡಿ, ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪುಂಡಲಿಕಪ್ಪ, ಶಿವರೆಡ್ಡಿ ಭೂಮಕ್ಕನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts