ಆಂಧ್ರಪ್ರದೇಶದ ಪಟಾಕಿ ತಯಾರಿಕಾ ಘಟಕದಲ್ಲಿ ಭಾರಿ ಬೆಂಕಿ ಅವಘಡ; 6 ಮಂದಿ ಸಾವು| Andhra Pradesh

andrapradesh
Published on

ಆಂಧ್ರಪ್ರದೇಶ; ಪರವಾನಗಿ ಪಡೆದ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ನಡೆದಿದೆ.

ರಾಯವರಂ ಮಂಡಲದ ಕೊಮರಿಪಲೆಂ ಗ್ರಾಮದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ಘಟಕದಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ, ಆದರೆ ಬೆಂಕಿಯ ತೀವ್ರತೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುರಕ್ಷತಾ ಕ್ರಮಗಳ ಕೊರತೆ ಅಥವಾ ರಾಸಾಯನಿಕಗಳ ಅಸಮರ್ಪಕ ನಿರ್ವಹಣೆ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಗಳು ಹೇಳಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವರವಾದ ತನಿಖೆ ಆರಂಭಿಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಅನಪರ್ತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಗನ್‌ಪೌಡರ್ ತಯಾರಿಸುವಾಗ ಬೆಂಕಿ ಹೊತ್ತಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್​ನಿಂದ ಈ ಅವಘಡ ಉಂಟಾಗಿರಬಹುದು ಎನ್ನಲಾಗಿದೆ.

(ಏಜೆನ್ಸೀಸ್)

ಇನ್ನೂ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಘಟನೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಸಾವುನೋವುಗಳ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು ಪರಿಹಾರ ಮತ್ತು ವೈದ್ಯಕೀಯ ನೆರವು ಪ್ರಯತ್ನಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ವೈಯಕ್ತಿಕವಾಗಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಭಾಗವಹಿಸುವಂತೆ ಚಂದ್ರಬಾಬು ನಾಯ್ಡು ಸೂಚನೆ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net