20.8 C
Bangalore
Sunday, December 8, 2019

ಬೀರೂರು ಪುರಸಭೆ ಅತಂತ್ರ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಕಡೂರು: ಬೀರೂರು ಪುರಸಭೆ ಚುನಾವಣೆ ಮತ ಎಣಿಕೆ ಗುರುವಾರ ನಡೆದು ಮತದಾರರು ಈ ಬಾರಿಯೂ ಯಾರಿಗೂ ಬಹುಮತ ನೀಡದೆ ಅತಂತ್ರವಾಗಿಸಿದ್ದಾರೆ.

23 ವಾರ್ಡ್​ಗಳಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದರೆ, ಕಾಂಗ್ರೆಸ್ 9 ಸ್ಥಾನ, ಜೆಡಿಎಸ್ 2 ಸ್ಥಾನ ಗೆಲ್ಲುವಲ್ಲಿ ಶಕ್ತವಾಗಿವೆ. ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಬಿಜೆಪಿ ಮತ್ತು ಕಾಂಗ್ರೆಸ್​ನ ಸ್ಥಾನ ಗಳಿಕೆ ತಿರುವು ಮುರುವು ಆಗಿದೆಯಷ್ಟೇ.

ಕಳೆದ ಬಾರಿ ಬಿಜೆಪಿ 9 ಸ್ಥಾನಗಳಲ್ಲಿ ಕಾಂಗ್ರೆಸ್ 10 ಸ್ಥಾನದಲ್ಲಿ, ಜೆಡಿಎಸ್ 2 ಸ್ಥಾನದಲ್ಲಿ ಹಾಗೂ ಓರ್ವ ಪಕ್ಷೇತರ ಮತ್ತು ಓರ್ವ ಕೆಜೆಪಿ ಸದಸ್ಯ ಪುರಸಭೆ ಪ್ರವೇಶಿಸಿದ್ದರು.

ಒಂದನೇ ವಾರ್ಡ್​ನ ಬಿಜೆಪಿ ಅಭ್ಯರ್ಥಿ ಎಂ.ಪಿ.ಸುದರ್ಶನ್ ತಮ್ಮ ಸಮೀಪದ ಪಕ್ಷೇತರ ಅಭ್ಯರ್ಥಿ ಬಿ.ಎಸ್.ಶಿವಕುಮಾರ್ ಅವರಿಗಿಂತ 457 ಮತಗಳ ಅಂತರ ಸಾಧಿಸಿ ಅತಿ ಹೆಚ್ಚು ಅಂತರದ ಅಭ್ಯರ್ಥಿಯಾಗಿ ವಿಜಯಿಯಾಗಿದ್ದಾರೆ. ಅತಿ ಕಡಿಮೆ ಅಂತರದಲ್ಲಿ ವಿಜಯಿಯಾಗಿರುವ 22ನೇ ವಾರ್ಡ್​ನ ಕಾಂಗ್ರೆಸ್ ಅಭ್ಯರ್ಥಿ ರವಿಕುಮಾರ್(ಎಲೆ) ಅವರು ಸಮೀಪದ ಬಿಜೆಪಿ ಅಭ್ಯರ್ಥಿ ಪೂಜಾರಿ ರಮೇಶ್ ಅವರಿಗಿಂತ 2 ಮತದ ಅಂತರದಲ್ಲಿ ವಿಜಯಿಯಾಗಿದ್ದಾರೆ.

ಬಿಜೆಪಿ 23 ವಾರ್ಡ್​ಗಳಲ್ಲಿ್ಲುೂ ಕಣಕ್ಕಿಳಿದು ಒಟ್ಟಾರೆ 5,867 ಮತಗಳನ್ನು ಗಳಿಸುವ ಮೂಲಕ ಅತಿ ಹೆಚ್ಚು ಮತ ಪಡೆದ ಪಕ್ಷವಾಗಿದೆ. 21 ವಾರ್ಡ್​ಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ 4,856 ಮತ ಗಳಿಸಿದ್ದು, ಜೆಡಿಎಸ್ 13 ವಾರ್ಡ್​ಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿ 1,493 ಮತ ಗಳಿಸಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

1ನೇ ವಾರ್ಡ್​ನ ಬಿಜೆಪಿಯ ಎಂ.ಪಿ.ಸುದರ್ಶನ್ ಹಾಗೂ ಕಾಂಗ್ರೆಸ್​ನ 4ನೇ ವಾರ್ಡ್​ನ ಲೋಕೇಶಪ್ಪ, 8ನೇ ವಾರ್ಡ್​ನ ಶಶಿಧರ್ ಮತ್ತು 22ನೇ ವಾರ್ಡ್​ನ ರವಿಕುಮಾರ್(ಎಲೆ) ಅವರು ಮರು ಆಯ್ಕೆಯಾದ ಸದಸ್ಯರಾಗಿದ್ದಾರೆ.

ಮತ ಎಣಿಕೆ ಕೇಂದ್ರ ಕಡೂರು ತಾಲೂಕು ಕಚೇರಿಯಲ್ಲಿ 8 ಗಂಟೆಗೆ ಆರಂಭವಾಗಬೇಕಾಗಿದ್ದ ಎಣಿಕೆ ಪೂರ್ವ ಸಿದ್ಧತೆ ಕೊರತೆಯಿಂದ 8.45ಕ್ಕೆ ಆರಂಭವಾದರೂ 9.45ರ ವೇಳೆಗೆ 22 ವಾರ್ಡ್​ಗಳ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಯಿತು.

ವಿಜೇತ ಅಭ್ಯರ್ಥಿಗಳನ್ನು ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಎಣಿಕಾ ಕೇಂದ್ರದ ಮುಂದೆ ಹೊತ್ತುಕೊಂಡು ಕುಣಿದು ಸಂಭ್ರಮಿಸಿದರು. ಅನೇಕ ಹೊಸಬರು ಮೊದಲ ಬಾರಿಗೆ ಪುರಸಭೆಗೆ ಪ್ರವೇಶ ಪಡೆದಿದ್ದು ಅವರ ಗೆಳೆಯರು ಹಾಗೂ ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಸಿಹಿ ಹಂಚಿದರು.

ಮತ ಎಣಿಕೆ ಕೇಂದ್ರಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಮಾಧ್ಯಮ ವರದಿಗಾರರನ್ನು ಎಣಿಕಾ ಕೇಂದ್ರಕ್ಕೆ ಪ್ರವೇಶಿಸಲು ಪೊಲೀಸರು ತಡೆದಿದ್ದರಿಂದ ಕೆಲ ಕಾಲ ಪೊಲೀಸರು ಮತ್ತು ಮಾಧ್ಯಮದವರ ಮಧ್ಯೆ ಮಾತಿನ ಚಕಮಕಿ ನಡೆದು ತಹಸೀಲ್ದಾರ್ ಮಧ್ಯಸ್ಥಿಕೆಯಲ್ಲಿ ಹಾಗೂ ಉಪವಿಭಾಗಾಧಿಕಾರಿ ಸೂಚನೆ ಮೇರೆಗೆ ವರದಿಗಾರರನ್ನು ಕೇಂದ್ರದೊಳಕ್ಕೆ ಬಿಡಲಾಯಿತು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...