More

    ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ; ಕೌತುಕ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

    ಶಬರಿಮಲೆ: ಅಯ್ಯಪ್ಪನ ಸನ್ನಿಧಿಯಲ್ಲಿ ಕಾಣಿಸಿದ ಮಕರಜ್ಯೋತಿಯನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು.

    ಪ್ರತಿವರ್ಷದಂತೆ ಈ ವರ್ಷವೂ ಮಕರ ಜ್ಯೋತಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸಂಜೆ ಪೊನ್ನಂಬಲಮೇಡು ಬೆಟ್ಟದಲ್ಲಿ ಜ್ಯೋತಿ ಕಾಣಿಸಿಕೊಂಡಿತು. ಅಯ್ಯಪ್ಪನ ಜ್ಯೋತಿ ಮೂರು ಬಾರಿ ಬೆಳಗಿತು.

    ಇಂದು ಗೋಚರಿಸಲಿರುವ ಮಕರಜ್ಯೋತಿ ದರ್ಶನಕ್ಕಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭಕ್ತರ ದಂಡೇ ಆಗಮಿಸಿತ್ತು. ದೇಗುಲದಲ್ಲಿ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿತ್ತು.

    ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಹೋಗುವ ಮಾರ್ಗ, ಸ್ಥಳದ ಸುತ್ತಮುತ್ತ ವಿಪರೀತ ಟ್ರಾಫಿಕ್​ ಜಾಮ್​ ಉಂಟಾಗಿದೆ. ಹಾಗೇ ಸ್ಥಳದಲ್ಲಿ ಬಿಗಿ ಭದ್ರತೆಯನ್ನೂ ಒದಗಿಸಲಾಗಿದೆ.  ಹೆಚ್ಚಿನ ಸಂಖ್ಯೆಯ ಪೊಲಿಸ್​ ಸಿಬ್ಬಂದಿಯನ್ನು, ಎನ್​ಡಿಆರ್​ಎಫ್​ ಮತ್ತು ಆರ್​ಆರ್​ಎಫ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರು ಭಕ್ತರ ಸುರಕ್ಷತೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ರಕ್ಷಣಾ ಸಿಬ್ಬಂದಿ ನಿಗಾ ವಹಿಸಿದ್ದಾರೆ.

    ಭಾನುವಾರದಿಂದಲೂ ದೇಗುಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹಾಗಾಗಿ ವಿವಿಧ ಶ್ರೇಣಿಗಳ ಹೆಚ್ಚುವರಿ 200 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ತಿಳಿಸಿದೆ.

    ದೇಗುಲದ ಸಮೀಪ 15 ಡಿವೈಎಸ್​ಪಿಗಳು, 36 ವೃತ್ತ ನಿರೀಕ್ಷಕರು ಸೇರಿ ಒಟ್ಟು 1400 ಪೊಲೀಸ್​ ಸಿಬ್ಬಂದಿ ದೇವಾಲಯ ಸಂಕೀರ್ಣದಲ್ಲಿ ಕರ್ತವ್ಯದಲ್ಲಿದ್ದಾರೆ. ಬಾಂಬ್​ ಸ್ಕ್ವಾಡ್​ನ 70 ಮಂದಿ, ದೂರಸಂಪರ್ಕ ವಿಭಾಗದ 20 ಸದಸ್ಯರನ್ನೂ ನಿಯೋಜಿಸಲಾಗಿದೆ. ಹಾಗೇ ಅಗ್ನಿಶಾಮಕದ ದಳದ ಸಿಬ್ಬಂದಿಯೂ ಇದ್ದಾರೆ ಎಂದು ಮಾಹಿತಿ ನೀಡಿದೆ.

    ಶಬರಿಮಲೆ ದೇವಾಲಯಕ್ಕೆ ಋತುಮತಿ ಆಗುವ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದಾಗಿನಿಂದ ಆ ಸ್ಥಳದ ಸ್ವಲ್ಪ ಸೂಕ್ಷ್ಮ ಪ್ರದೇಶವಾಗಿ ಮಾರ್ಪಟ್ಟಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಹೇಳಲಾಗಿದೆ.(ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts