25.1 C
Bangalore
Friday, December 6, 2019

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಿ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಯಳಂದೂರು: ಪಟ್ಟಣದಲ್ಲಿರುವ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಸೆ.17ರಂದು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ಮಾಡಿಕೊಡಲಾಗುತ್ತಿದ್ದು, ಪ್ರತಿಯೊಬ್ಬರೂ ಇದರ ಲಾಭ ಪಡೆದುಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರತ್ನ ತಿಳಿಸಿದರು.

ಪಟ್ಟಣದ ಸಿಡಿಎಸ್ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಹಾಗೂ ಪೋಷಣ್ ಅಭಿಯಾನ ಕುರಿತ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಿಪಿಎಲ್ ಕುಟುಂಬದವರಿಗೆ ಉತ್ತಮ ಹಾಗೂ ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ನೀಡುವ ಕೇಂದ್ರದ ಮಹತ್ತರ ಯೋಜನೆ ಇದಾಗಿದೆ. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಇದರ ಲಾಭ ಪಡೆದುಕೊಳ್ಳಬೇಕು. ಪಟ್ಟಣ ವ್ಯಾಪ್ತಿಯಲ್ಲಿ 70 ಮಹಿಳಾ ಸ್ವಸಹಾಯ ಸಂಘಗಳಿದ್ದು, 300ಕ್ಕೂ ಹೆಚ್ಚು ಸದಸ್ಯರು ಇದ್ದಾರೆ. ಈಗಾಗಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಕೌಶಲ ಇಲಾಖೆಯ ಅಜ್ಮತ್‌ಪಾಷಾ ಮಾತನಾಡಿ, ಸೆ. 20 ರಂದು ಪಟ್ಟಣದ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಕೌಶಲ ಇಲಾಖೆಯ ಸಿಡಿಒ ಡಾ.ಪುಟ್ಟಸ್ವಾಮಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಕೇಶವ, ಐಸಿಡಿಎಸ್‌ನ ಮೇಲ್ವಿಚಾರಕಿ ನಾಗಮ್ಮ, ಆರೋಗ್ಯಮಿತ್ರ ಸಹಾಯಕಿ ವೇದಾವತಿ, ವೈ.ಬಿ.ಪ್ರೇಮಾ, ಕೆ.ಮೀನಾಕ್ಷಿ, ಪಪಂ ಸಮುದಾಯ ಸಂಘಟಕ ಪರಶಿವಮೂರ್ತಿ, ಮಲ್ಲಿಕಾರ್ಜುನ ಇತರರು ಇದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...