More

    ಸರ್ಕಾರದ ಯೋಜನೆಗಳ ಸದುಪಯೋಗವಾಗಲಿ

    ತೀರ್ಥಹಳ್ಳಿ: ಸಾಮಾಜಿಕ ನ್ಯಾಯದ ಆಧಾರದಲ್ಲಿ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳುವ ಮೂಲಕ ಉತ್ತಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
    ಶಿವಮೊಗ್ಗ ಜಿಲ್ಲಾ ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಪಟ್ಟಣದ ರೋಟರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಉದ್ಯಮಶೀಲತಾ ಜಾಗೃತಿ ಶಿಬಿರ ಹಾಗೂ ಸುಧಾರಿತ ಉಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಉಚಿತವಾಗಿ ಸಿಕ್ಕಿದ್ದು ಎಂದು ಸರ್ಕಾರ ನೀಡಿದ ಉಪಕರಣಗಳನ್ನು ಮೂಲೆಗೆ ಎಸೆಯಬೇಡಿ. ನಿಮಗೆ ಬೇಡವಾದಲ್ಲಿ ಅಗತ್ಯವಿರುವವರಿಗೆ ನೀಡಬೇಕು ಎಂದು ಹೇಳಿದರು.
    ಆರ್ಥಿಕವಾಗಿ ದುರ್ಬಲರಾಗಿದ್ದು, ತಾಂತ್ರಿಕ ತರಬೇತಿ ಪಡೆದ ಕುಶಲಕರ್ಮಿಗಳಿಗೆ ದುಬಾರಿ ಬೆಲೆಯ ಅಗತ್ಯ ಉಪಕರಣಗಳನ್ನು ಖರೀದಿಸಲು ಸಾಧ್ಯವಿಲ್ಲ. ಅರ್ಹತೆ ಇದ್ದರೂ ಬೇರೆಯವರ ಅಡಿಯಾಳಾಗಿ ದುಡಿಯುವ ಅನಿವಾರ್ಯತೆ ಇರುತ್ತದೆ. ಇಂತಹ ಶ್ರಮಜೀವಿ ವರ್ಗದವರಲ್ಲಿ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ ಇಂತಹ ಯೋಜನೆಗಳು ಜಾರಿಯಲ್ಲಿದ್ದು ಭದ್ರ ಭವಿಷ್ಯ ರೂಪಿಸಿಕೊಳ್ಳಲು ಇದು ಸಹಕಾರಿ ಎಂದು ಹೇಳಿದರು.
    ಕಲ್ಲು ಕುಟಿಕರು, ಬಡಗಿಗಳು, ಟೈಲರಿಂಗ್ ಮತ್ತು ಗಾರೆ ಕೆಲಸ ಮಾಡುವ 85 ಮಂದಿ ಫಲಾನುಭವಿಗಳಿಗೆ ಉಪಕರಣಗಳನ್ನು ವಿತರಿಸಲಾಯಿತು. ಪಪಂ ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ, ಕೈಗಾರಿಕಾ ವಿಸ್ತರಣಾಧಿಕಾರಿ ನಾಗರಾಜ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts