More

    ಅನುದಾನಗಳನ್ನು ಸದ್ಬಳಕೆ ಮಾಡಿಕೊಳ್ಳಿ

    ಚನ್ನರಾಯಪಟ್ಟಣ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಪಂ ಅನುದಾನಗಳನ್ನು ಸಮಯಕ್ಕೆ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 2022-23ನೇ ಸಾಲಿನ 15ನೇ ಹಣಕಾಸಿನ 5.71 ಕೋಟಿ ಹಣ ಸದ್ಬಳಕೆ ಮಾಡಿಕೊಳ್ಳದೆ ಹಾಗೇ ಉಳಿದಿದೆ. ಅ.30ರ ಒಳಗಡೆ ಈ ಹಣವನ್ನ ಸದ್ವಿನಿಯೋಗ ಮಾಡಿಕೊಳ್ಳಬೇಕು.

    ಕಾಮಗಾರಿಯ ಬದಲಾವಣೆ ಇದ್ದಲ್ಲಿ ಕೂಡಲೇ ಗ್ರಾಪಂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ಬದಲಾವಣೆಯ ಪ್ರಸ್ತಾವನೆಯನ್ನು ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ತಲುಪಿಸುವಂತೆ ತಿಳಿಸಿದರು.

    ತಾಪಂ ಇಒ ಜಿ.ಆರ್. ಹರೀಶ್ ಮಾತನಾಡಿ, ಅ.30ರ ಒಳಗಡೆ ಸದ್ಬಳಕೆ ಮಾಡಿಕೊಳ್ಳದಿದ್ದಲ್ಲಿ ಅಂತಹ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ತಾಕೀತು ಮಾಡಿದರು.

    ಈಗಾಗಲೇ ಚಾಲ್ತಿಯಲ್ಲಿರುವ ಬಸವ ವಸತಿ ಯೋಜನೆ ಅಂಬೇಡ್ಕರ್ ವಸತಿ ಯೋಜನೆಗಳನ್ನು ಬೇಗ ಪೂರ್ಣಿಗೊಳಿಸಿ ಅದರ ಹಣವನ್ನು ಫಲಾನುಭವಿಗಳಿಗೆ ಬರುವಂತೆ ನೋಡಿಕೊಳ್ಳಬೇಕು. ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ 60:40 ಅನುಪಾತ ಮೀರದಂತೆ ಕಾಮಗಾರಿ ನಿರ್ವಹಿಸಬೇಕು. ಪಂಚಾಯಿತಿಯ ಅಭಿವೃದ್ಧಿ ವಿಚಾರದಲ್ಲಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸುವಂತೆ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.

    ಡೇಟಾ ಆಪರೇಟರ್‌ಗಳು ಪಂಚಾಯಿತಿಗೆ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕರ್ತವ್ಯ ನಿರ್ವಹಿಸಲು ತಿಳಿಸಿದರು.ಸಭೆಯಲ್ಲಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts