ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲಿ

blank

ಬೇಲೂರು: ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ತಹಸೀಲ್ದಾರ್ ಎಂ.ಮಮತಾ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ, ಶಿಲ್ಪಕಲಾ ಮಹಿಳಾ ಒಕ್ಕೂಟ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೌಕರರ ಸಂಘದಿಂದ ಶುಕ್ರವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ. ಇದನ್ನು ಪ್ರತಿಯೊಬ್ಬರೂ ಚಲಾಯಿಸಿ ಅರ್ಹರ ಆಯ್ಕೆಗೆ ಮುಂದಾಗಬೇಕು. ಮಹಿಳೆಯರು ಕೆಲಸದ ನೆಪ ಹೇಳಿ ಮತದಾನದಿಂದ ವಂಚಿತರಾಗವಾರದು ಎಂದರು.

ಹೇಮಾವತಿ ಸ್ತ್ರೀಶಕ್ತಿ ಒಕ್ಕೂಟ ಜಿಲ್ಲಾಧ್ಯಕ್ಷೆ ವೈ.ಆರ್.ಭಾರತೀಗೌಡ ಮಾತನಾಡಿ, ಸ್ತ್ರೀ ಶಕ್ತಿ ಸಂಘಗಳಿಗೆ ಸರ್ಕಾರ ಸುತ್ತು ನಿಧಿ ಹಾಗೂ ಅಮೃತ ಯೋಜನೆಯಡಿ ಪ್ರೋತ್ಸಾಹ ಧನ ನೀಡುತಿದ್ದು ಇದನ್ನು ಮಹಿಳೆಯರು ಸದುಪಯೋಗ ಪಡೆದು ಕೊಳ್ಳಬೇಕು. ಜತೆಗೆ 30 ವರ್ಷಗಳಿಂದ ಮಹಿಳಾ ದಿನಾಚರಣೆಯನ್ನು ನಡೆಸುತ್ತಿದ್ದು, ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದರು.

ಪತ್ರಕರ್ತ ಮಲ್ಲೇಶ್ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದೆ. ಜತೆಗೆ ಇಂದು ಮಹಿಳೆ ವಿಜ್ಞಾನ, ತಂತ್ರಜ್ಞಾನ, ಸಾಮಾಜಿಕ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುವ ಮೂಲಕ ಪುರುಷರಿಗಿಂತ ಕಮ್ಮಿ ಇಲ್ಲದಂತೆ ಕೆಲಸ ಮಾಡುತ್ತಿದ್ದಾರೆ. ಹೀಗಿದ್ದರೂ ಹೆಣ್ಣಿನ ಮೇಲೆ ನಿರಂತರ ಶೋಷಣೆ ನಡೆಯುತ್ತಿರುವುದು ಶೋಚನಿಯ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಮಲ್ಲೇಶ್ ಹಾಗೂ ಪೌರಕಾರ್ಮಿಕ ಮಹಿಳೆ ಏಮಲಮ್ಮ ಅವರನ್ನು ಅಭಿನಂದಿಸಲಾಯಿತು. ಸಿಡಿಪಿಒ ಉಮೇಶ್, ಸಿಐಟಿಯು ಜಿಲ್ಲಾಧ್ಯಕ್ಷೆ ಕಾಮಾಕ್ಷಿ ರಾಜು, ಪ್ರಧಾನ ಕಾರ್ಯದರ್ಶಿ ಮಂಜುಳಾ, ಶಿಲ್ಪಕಲಾ ಮಹಿಳಾ ಒಕ್ಕೂಟದ ಖಜಾಂಚಿ ಚಂದ್ರಮ್ಮ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಭಾಗ್ಯಮ್ಮ, ಇಂದಿರಮ್ಮ ಇತರರಿದ್ದರು.

Share This Article

ಕೆಟ್ಟ ಕೊಲೆಸ್ಟ್ರಾಲ್​ ಅನ್ನು ನ್ಯಾಚುರಲ್​ ಆಗಿ ಕಡಿಮೆ ಮಾಡಬೇಕಾ? ಕೇವಲ ಈ ಬದಲಾವಣೆ ಮಾಡಿ ಸಾಕು! Bad cholesterol

Bad cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು.…

ಈ 3 ರಾಶಿಯಲ್ಲಿ ಜನಿಸಿದವರನ್ನು ಶಾಂತಿಯ ಪ್ರತಿರೂಪ ಎಂದು ಹೇಳಲಾಗುತ್ತೆ! ನೀವು ಯಾವ ರಾಶಿಯವರು? Zodiac Signs

Zodiac Signs: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ ಜನಿಸುತ್ತಾನೆ…

Summer Tips: ಬೇಸಿಗೆಯಲ್ಲಿ ಕೆಟ್ಟ ಬೆವರು ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

Summer Tips: ಬೇಸಿಗೆಯಲ್ಲಿ ಬೆವರು ವಾಸನೆಯನ್ನು ತಪ್ಪಿಸಲು, ನೀವು ಪ್ರತಿದಿನ ಸ್ನಾನ ಮಾಡುವುದು ಮತ್ತು ನಿಯಮಿತವಾಗಿ…