More

  ‘ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಪ್ರಗತಿ ಸಾಧಿಸಿ’

  ಮೈಸೂರು: ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವ ಜತೆಗೆ ಎಲ್ಲ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಅಧಿಕಾರಿಗಳು ಕ್ರಿಯಾ ಯೋಜನೆಯಂತೆ ಕಾರ್ಯ ನಿರ್ವಹಣೆ ಮಾಡಬೇಕು. ಆರ್‌ಬಿಎಸ್‌ಕೆ ಕಾರ್ಯಕ್ರಮವು ಮಕ್ಕಳ ಆರೋಗ್ಯ ತಪಾಸಣೆಯಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಮಾರ್ಗಸೂಚಿ ಅನುಸಾರ ಕ್ರಮ ವಹಿಸುವಂತೆ ತಿಳಿಸಿದರು.
  ಕ್ಷೇತ್ರ ಮಟ್ಟದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಜನ ಸಾಮಾನ್ಯರಿಗೆ ಆರೋಗ್ಯ ಸೇವೆಗಳು ಪರಿಣಾಮಕಾರಿ ದೊರೆಯಬೇಕು. ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅಲ್ಲದೆ ಗ್ರಾಮಗಳಲ್ಲಿ ಫ್ಲೋರೈಡ್‌ಯುಕ್ತ ನೀರಿಗೆ ಪರ್ಯಾಯವಾಗಿ ಉತ್ತಮ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ವಹಿಸುವಂತೆ ಸಂಬಂಧಪಟ್ಟ ಇಂಜಿನಿಯರ್‌ಗೆ ಸೂಚಿಸಿದರು.
  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts