More

    ಸುರಕ್ಷಿತ ಚಾಲನೆಗೆ ಹೆಚ್ಚಿನ ಆದ್ಯತೆ ನೀಡಿ

    ಬಾಳೆಹೊನ್ನೂರು: ಸಾರಿಗೆ ಹಾಗೂ ರಸ್ತೆ ನಿಯಮಗಳನ್ನು ಪಾಲಿಸದೆ ಭಾರತದಲ್ಲಿ ವಾರ್ಷಿಕ ಐದು ಲಕ್ಷಕ್ಕೂ ಹೆಚ್ಚು ಜನರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ, ರಾಜ್ಯದಲ್ಲಿ 1.5 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ಪಿಎಸ್‌ಐ ರವೀಶ್ ಹೇಳಿದರು.
    ರೇಣುಕಾ ನಗರದ ಜಗದ್ಗುರು ರೇಣುಕಾಚಾರ್ಯ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ರೋಟರಿ ಕ್ಲಬ್‌ವತಿಯಿಂದ ಬುಧವಾರ ಆಯೋಜಿಸಿದ್ದ ರಸ್ತೆ ಸುರಕ್ಷತೆ ಚಾಲನೆ ಕುರಿತ ಮಾಹಿತಿ ಶಿಬಿರದಲ್ಲಿ ಮಾತನಾಡಿದರು.
    18 ವರ್ಷದೊಳಗಿನವರು ದಾಖಲೆ ಇಲ್ಲದೆ ವಾಹನ ಚಾಲನೆ ಮಾಡಿದರೆ 25 ಸಾವಿರ ರೂ. ದಂಡ ಹಾಗೂ ಪಾಲಕರ ಮೇಲೆ ಪ್ರಕರಣ ದಾಖಲಾಗುವುದು. ಜೀವವಿಮೆ ದಾಖಲೆ, ವಾಹನಗಳ ಸಮಗ್ರ ದಾಖಲೆಯೊಂದಿಗೆ ವಾಹನ ಚಾಲನೆ ಮಾಡಬೇಕು. ಇಲ್ಲವಾದಲ್ಲಿ ಹೆಚ್ಚಿನ ದಂಡ ತೆರಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕಾನೂನು ನಿಯಮ ಪಾಲನೆ ಮಾಡಬೇಕು ಎಂದರು.
    ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಯಜ್ಞಪುರುಷ ಭಟ್ ಮಾತನಾಡಿ, ಪಾಲಕರು ತಮ್ಮ ಮಕ್ಕಳಿಗೆ ದಾಖಲೆ ಇಲ್ಲದ ವಾಹನಗಳನ್ನು ನೀಡಿ ಚಾಲನೆಗೆ ಪ್ರೇರಣೆ ನೀಡುತ್ತಿದ್ದಾರೆ. ಇದರಿಂದಾಗಿ ತಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಸುರಕ್ಷಿತ ಚಾಲನೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದರು.
    ರೋಟರಿ ಕ್ಲಬ್ ಅಧ್ಯಕ್ಷ ಎ.ಆರ್.ಸುರೇಂದ್ರ, ತರಬೇತಿ ಕೇಂದ್ರದ ಉಪನ್ಯಾಸಕ ಉಮೇಶ್, ಚಂದ್ರಶೇಖರ್, ರೋಟರಿ ಕಾರ್ಯದರ್ಶಿ ಯಶವಂತ, ಸದಸ್ಯರಾದ ಸಿ.ಪಿ.ರಮೇಶ್,ತಿಮ್ಮಯ್ಯ, ಸಿ.ವಿ.ಸುನೀಲ್, ವೆಂಕಟೇಶ್, ಲಕ್ಷ್ಮೀಶ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts