More

    ಔಷಧ ಪ್ರತಿನಿಧಿಗಳಿಗೆ ಶಾಸನ ಬದ್ಧ ನಿಯಮ ರೂಪಿಸಿ

    ಬಾಗಲಕೋಟೆ: ಔಷಧ ಮಾರಾಟ ಹಾಗೂ ಪ್ರಚಾರದ ಉದ್ಯೋಗಿಗಳಿಗೆ ಶಾಸನಬದ್ಧ ನಿಯಮಗಳನ್ನು ರೂಪಿಸಬೇಕು ಎಂದು ಆಗ್ರಹಿಸಿ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

    ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ಅಪರ ಜಿಲ್ಲಾಧಿಕಾರಿ ರಮೇಶ ಕೆ. ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಇದನ್ನೂ ಓದಿ: ಸಂಭ್ರಮದ ವೀರಭದ್ರೇಶ್ವರ ಕಾರ್ತಿಕೋತ್ಸವ

    ಸಂಘಟನೆ ರಾಜ್ಯ ಕಾರ್ಯದರ್ಶಿ ವಿನಾಯಕ ದೇಸಾಯಿ ಮಾತನಾಡಿ, ಕಂಪನಿಗಳು ತಮ್ಮ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಕೆಲಸದ ಸ್ಥಳಗಳಿಗೆ ಯಾವುದು ಅಡೆತಡೆ ಇಲ್ಲದೆ ಪ್ರವೇಶ ನೀಡಬೇಕು.

    ಸರ್ಕಾರಿ ಆಸ್ಪತ್ರೆ, ಸಂಸ್ಥೆಗಳು ಹಾಗೂ ವೈದ್ಯಕೀಯ ಪ್ರತಿನಿಧಿಗಳ ಪ್ರವೇಶದ ಮೇಲಿನ ಎಲ್ಲ ನಿರ್ಬಂಧಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.

    ಮಾರಾಟ ಪ್ರಚಾರ ನೌಕರರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸಂದೇಶವನ್ನು ಸಾರ್ವಜನಿಕರಿಗೆ ತಿಳಿಸಬೇಕು. ಜತೆಗೆ ಮಾರಾಟ ಉತ್ತೇಜನಾ ಉದ್ಯೋಗಿಗಳ ದೀರ್ಘ ಕಾಲದ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಮಿಕ ಅಧಿಕಾರಿಗಳು ಹಾಗೂ ಕೇಂದ್ರ ಕಾರ್ಮಿಕ ಸಚಿವರು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

    ಮುಖಂಡರಾದ ಶ್ರೀನಿವಾಸ ಗುಮಾಸ್ತೆ, ಸಂಗಮೇಶ ಅಬ್ದಲಪುರ, ಸುರೇಶ ಹಳ್ಳಿ, ಸತೀಶ ಪಾಟೀಲ, ಶ್ರೀಕಾಂತ ಪಾಟೀಲ, ಜನಾರ್ಧನ ಕುಲಕರ್ಣಿ, ಅರವಿಂದ ಸುಲಾಖೆ, ಎಸ್.ಎ.ಬಾದಾಮಿಕರ, ರಮೇಶ ಕೆ. ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts