More

    ಇ-ತ್ಯಾಜ್ಯ ಪರಿಸರಕ್ಕೆ ಸೇರದಂತೆ ನೋಡಿಕೊಳ್ಳಿ-ಡಾ.ಗಣಪತಿ ಹೆಗಡೆ

    ಕಾರವಾರ:ಪ್ರತಿಯೊಬ್ಬ ನಾಗರಿಕನು ತನ್ನಿಂದ ಉತ್ಪತ್ತಿಯಾಗುವ ಇ-ತ್ಯಾಜ್ಯವನ್ನು ಪರಿಸರಕ್ಕೆ ಸೇರದಂತೆ ನೋಡಿಕೊಳ್ಳುವ
    ಜವಾಬ್ದಾರಿಯನ್ನು ಹೊಂದಿರಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ ಹೇಳಿದರು.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಸಂಗಮ ಸೇವಾ ಸಂಸ್ಥೆಯಿಂದ ಅಂಕೋಲಾದ ಪೂಜಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿಅಂತಾರಾಷ್ಟ್ರೀಯ ಇ-ತ್ಯಾಜ್ಯ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಇ-ವೆಸ್ಟ್ ಹಾಗೂ ಪರಿಸರ ಸ್ನೇಹಿ ದೀಪಾವಳಿ ಕುರಿತ ವಿಚಾರ ಸಂಕಿರಣದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

    ಇದನ್ನೂ ಓದಿ: ಅರಣ್ಯ ಅತಿಕ್ರಮಣದಾರರಿಗೆ ಪಹಣಿ ಪತ್ರಿಕೆ ನೀಡಲು ಆಗ್ರಹ

    ಇ-ತ್ಯಾಜ್ಯದ ಉತ್ಪಾದನೆಯು ಪ್ರತಿ ವರ್ಷ ಏರಿಕೆಯಾಗುತ್ತಿದ್ದು, ಇದರ ಸರಿಯಾದ ನಿರ್ವಹಣೆ ಇಲ್ಲದೇ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈಗಾಗಲೇ ನಗರ ಪ್ರದೇಶಗಳಲ್ಲಿ ಇತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಡಬ್ಬಿ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಬಳಸಬೇಕು ಎಂದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಬಿ.ಕೆ.
    ಸಂತೋಷ, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ಪ್ರಾಂಶುಪಾಲೆ ಡಾ. ಶಾರದಾ ಭಟ್ಟ, ಸಂಗಮ ಸೇವಾ ಸಂಸ್ಥೆಯ ಅಧ್ಯಕ್ಷ
    ರವೀಂದ್ರ ಎನ್ ಶೆಟ್ಟಿ, ಉಪನ್ಯಾಸಕರು ವಿದ್ಯಾರ್ಥಿಗಳು ಇತರರು ಇದ್ದರು.
    ಗಿರೀಶ ಆರ್ . ಸ್ವಾಗತಿಸಿದರು, ಆಶ್ರಿತಾ ಗುನಗಾ ಕಾರ್ಯಕ್ರಮ ನಿರೂಪಿಸಿದರು, ಕೆಎಲ್ಇ ಕೌಟುಂಬಿಕ ಸಲಹಾ ಕೇಂದ್ರ,ದ ಸಲಹೆಗಾರ
    ತಿಮ್ಮಣ್ಣ ಭಟ್ಟ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts