More

    ನಗರ ಸ್ವಚ್ಛ, ಸುಂದರವಾಗಿಸಿ

    ವಿಜಯಪುರ: ಐತಿಹಾಸಿಕ ಹಿನ್ನೆಲೆ ಹೊಂದಿದ ವಿಜಯಪುರ ನಗರವನ್ನು ಸ್ವಚ್ಛ ಹಾಗೂ ಸುಂದರವನ್ನಾಗಿಸುವಂತೆ ಲೋಕಾಯುಕ್ತ ಅಧೀಕ್ಷಕ ಹನುಮಂತರಾಯ ಅಧಿಕಾರಿಗಳಿಗೆ ಸೂಚಿಸಿದರು.

    ಬುಧವಾರ ಸ್ಥಳೀಯ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ನಡೆಸಿದ ಅವರು, ನಿತ್ಯ ನೂರಾರು ಪ್ರವಾಸಿಗರು ವಿಜಯಪುರ ನಗರಕ್ಕೆ ಆಗಮಿಸುತ್ತಾರೆ. ದೇಶ-ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

    ಸ್ಯಾಟ್‌ಲೈಟ್ ಬಸ್ ನಿಲ್ದಾಣ, ಶಿವಾಜಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಕೋರ್ಟ್ ಆವರಣ, ಗಗನ ಮಹಲ್ ಹಾಗೂ ಎಪಿಎಂಸಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವೀಕ್ಷಿಸಿದರು. ಸ್ಯಾಟ್‌ಲೈಟ್ ಬಸ್ ನಿಲ್ದಾಣ ಸುತ್ತಲೂ ಗಿಡ ನೆಡುವಂತೆ ಸೂಚಿಸಿದರಲ್ಲದೆ, ಸ್ವಚ್ಛತೆ ಕಾಪಾಡಲು ತಿಳಿಸಿದರು. ಹಸಿರು ಹುಲ್ಲು ಬೆಳೆಸುವ ಮೂಲಕ ಸುಂದರಗೊಳಿಸಬೇಕೆಂದರು. ದಿನದಲ್ಲಿ ಎರಡು ಬಾರಿ ತ್ಯಾಜ್ಯ ವಿಲೇವಾರಿಗೊಳಿಸಬೇಕೆಂದರು.

    ಶಿವಾಜಿ ವೃತ್ತದಲ್ಲಿರುವ ಕೋಟೆ ಗೋಡೆಗೆ ಹೊಂದಿಕೊಂಡಂತೆೆ ಕಂದಕದ ಹತ್ತಿರ ಎತ್ತರದ ಗೋಡೆ ನಿರ್ಮಿಸಲು ಸೂಚಿಸಿದರು. ಎಲ್‌ಬಿಎಸ್ ಮಾರುಕಟ್ಟೆಗೆ ಭೇಟಿ ನೀಡಿ, ಸ್ವಚ್ಛತೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಪೌರ ಕಾರ್ಮಿಕರನ್ನು ಅಭಿನಂದಿಸಿದರು. ಸ್ವಚ್ಛತೆ ಜತೆಗೆ ತಮ್ಮ ಆರೋಗ್ಯ ಕುರಿತು ಹೆಚ್ಚು ಗಮನ ಹರಿಸುವಂತೆ ಅವರಿಗೆ ತಿಳಿಸಿದರು.

    ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ ಸೌದಾಗರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ಕಲ್ಯಾಣ ಕರ್ನಾಟಕ ಸಾರಿಗೆ ವಿಜಯಪುರ ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ಜೆ.ಎಂ. ಫಯಾಜ್, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಆನಂದ ಟಕ್ಕನ್ನವರ ಹಾಗೂ ಆನಂದ ಡೋಣಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts