More

    ಅರ್ಹರಿಗೆ ಸವಲತ್ತು ದೊರಕಿಸಿಕೊಡಿ

    ನಂಜನಗೂಡು: ಕೃಷಿ ಯಂತ್ರಧಾರೆ ಸೇವಾ ಕೇಂದ್ರಗಳಲ್ಲಿ ಸಿಗುವ ನೆರವಿನ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ನೀಡಿ ಸರ್ಕಾರಿ ಸವಲತ್ತು ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು.

    ತಾಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಬುಧವಾರ ಕೃಷಿ ಯಂತ್ರಧಾರೆ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

    ಸಿದ್ದರಾಮಯ್ಯ ಅವಧಿಯ ಸರ್ಕಾರದಲ್ಲಿ ಆರಂಭಗೊಂಡ ಈ ಯೋಜನೆ ರೈತರಿಗೆ ತಲುಪಲು ಇಷ್ಟು ವರ್ಷ ಬೇಕಾಯಿತು. ಸೇವಾ ಕೇಂದ್ರ ಪ್ರಾರಂಭಗೊಂಡ ನಂತರವೂ ರೈತರಿಗೆ ಸವಲತ್ತು ತಲುಪಿಸುವುದು ವಿಳಂಬ ಆಗುವುದು ಬೇಡ. ಕೃಷಿ ಸೇವಾ ಕೇಂದ್ರ ಕವಲಂದೆ ಗ್ರಾಮದಲ್ಲಿ ಇರುವ ಬಗ್ಗೆ ಹೆಚ್ಚಿನ ಪ್ರಚಾರದ ಅಗತ್ಯವಿದೆ ಎಂದರು.

    ಬಾಡಿಗೆ ಸೇವಾ ಕೇಂದ್ರದಲ್ಲಿರುವ ಎಲ್ಲ ಉಪಕರಣಗಳ ದರವನ್ನು ರೈತರಿಗೆ ಸರಿಯಾಗಿ ತಿಳಿಸಬೇಕು. ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಘೋಷಣೆ ಮಾಡಲಿದ್ದು, ರಾಜ್ಯದ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುವ ವಿಶ್ವಾಸವಿದೆ ಎಂದು ಹೇಳಿದರು.

    ಕೆಲವು ಭಾಗಗಳಲ್ಲಿ ಮಳೆಯಿಂದ ಹಾನಿಯಾದರೆ ಮತ್ತೆ ಕೆಲವು ಭಾಗಗಳಲ್ಲಿ ಮಳೆ ಇಲ್ಲದೆ ಬೆಳೆ ಹಾನಿಯಾಗಿದೆ. ದೊಡ್ಡಕವಲಂದೆ ಹೋಬಳಿಯ ಕೆಲವು ಗ್ರಾಮಗಳಲ್ಲಿ ಈಗಲೂ ಕುಡಿಯುವ ನೀರಿನ ಸಮಸ್ಯೆ ಇದೆ. ನನ್ನ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ಶಾಶ್ವತವಾಗಿ ಕುಡಿಯುವ ನೀರನ್ನು ಒದಗಿಸುವ ಯೋಚನೆ ಇದ್ದು, ಹಂತ ಹಂತವಾಗಿ ಕಾಮಗಾರಿಯನ್ನು ಪ್ರಾರಂಭಿಸುವುದಾಗಿ ತಿಳಿಸಿದರು.

    ತಾಪಂ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಣ್ಣ, ಸದಸ್ಯರಾದ ಸಿ.ಎಂ.ಮಹದೇವಯ್ಯ, ಬಿ.ಎಸ್.ರಾಮು, ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕುಂಬ್ರಳ್ಳಿ ಸುಬ್ಬಣ್ಣ, ತಾಲೂಕು ಅಧ್ಯಕ್ಷ ಪಿ.ಮಹೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್, ಸತೀಶ್, ಶಿವಕುಮಾರ್, ಮಹದೇವಸ್ವಾಮಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts