ಹರಪನಹಳ್ಳಿ: ಮಹಿಳೆ ಸಮಾಜ ಮತ್ತು ಸಂಸಾರಿಕ ಜೀವನದ ಜವಾಬ್ದಾರಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾಳೆ ಎಂದು ಗುಡ್ಡದ ವಿರಕ್ತ ಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಹೇಳಿದರು.
ಇದನ್ನೂ ಓದಿ:ಮಾಳಮಡ್ಡಿಯಲ್ಲಿ ಹಾಡಹಗಲೇ ಮಹಿಳೆಯನ್ನು ಕೂಡಿ ಹಾಕಿ ಕಳ್ಳತನ
ತಾಲೂಕಿನ ನೀಲಗುಂದ ಗ್ರಾಮದ ಗುಡ್ಡದ ವಿರಕ್ತ ಮಠದಲ್ಲಿ ಧರ್ಮಸ್ಥಳ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ತಾಲುಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಹಾಗೂ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರು ಅಡುಗೆ ಮನೆಗೆ ಸೀಮಿವಾಗದೆ ಸ್ವಾವಲಂಬಿಯಾಗಬೇಕು. ಧರ್ಮಸ್ಥಳ ಸಂಘದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
ತಾಲೂಕು ಯೋಜನಾಧಿಕಾರಿ ಡಿ.ಸುಬ್ರಹ್ಮಣ್ಯ ಮಾತನಾಡಿ, ಮಹಿಳೆಯರು ಪೌಷ್ಠಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಮಹಿಳೆ ಅಬಲೆಯಲ್ಲ ಸಬಲೆ. ಸ್ವಾವಲಂಬನೆ ಇಂದ ಜೀವಿಸಲು ಸಂಸ್ಥೆ ಸಾಕಷ್ಟು ಉದ್ಯೋಗಗಳನ್ನು ಸೃಷ್ಠಿಸಿದೆ. ಜತೆಗ ಸುಲಭವಾಗಿ ಸಾಲ ಸೌಲಭ್ಯ ಒದಗಿಸುತ್ತಿದೆ ಎಂದರು.
ವಕೀಲೆ ಜೆ.ಸೀಮಾ ಮಾತನಾಡಿ, ಪ್ರಾಚೀನ ಕಾಲದಿಂದ ಭಾರತದಲ್ಲಿ ಹೆಣ್ಣಿಗೆ ಪೂಜನೀಯ ಸ್ಥಾನವಿದೆ. ಪ್ರತಿಭಾವಂತ ಬಾಲಕಿಯರ ಉನ್ನತ ವ್ಯಾಸಂಗಕ್ಕೆ ಪೋಷಕರು ಸಮ್ಮತಿ ನೀಡದೆ ಅವರ ಆಸೆಯನ್ನು ಬಾಲ್ಯದಲ್ಲಿ ಕಮರಿಸುತ್ತಾರೆ. ಮಹಿಳೆಯರಿಗಾಗಿ ಹಲವಾರು ಕಾನೂನುಗಳಿವೆ ಎಂದರು.