More

    ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಳ್ಳಿ

    ಚಿಕ್ಕಮಗಳೂರು: ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತು ಮತ್ತು ಸೌಲಭ್ಯಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೋಟರಿ ಜಿಲ್ಲಾ ರಾಜ್ಯಪಾಲೆ ಬಿ.ಸಿ.ಗೀತಾ ಸಲಹೆ ನೀಡಿದರು.

    ನಗರದ ಸರ್ಕಾರಿ ಹೆರಿಗೆ ಆಸ್ಪತ್ರೆ ಆವರಣದಲ್ಲಿ ೧.೭೫ ಲಕ್ಷ ರೂ. ವೆಚ್ಚದಲ್ಲಿ ರೋಟರಿ ಕಾಫಿ ಲ್ಯಾಂಡ್ ನಿರ್ಮಿಸಿರುವ ರೋಟರಿ ಥೀಮ್ ಪಾರ್ಕ್ ಅನ್ನು ಬುಧವಾರ ಸಾರ್ವಜನಿಕ ಸೇವೆಗೆ ಸಮರ್ಪಿಸಿ ಮಾತನಾಡಿದ ಅವರು, ಸೌಲಭ್ಯ, ಸವಲತ್ತುಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಂಡು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಸರ್ಕಾರ ಮತ್ತು ಸಂಘ ಸಂಸ್ಥೆಗಳ ಶ್ರಮ ಸಾರ್ಥಕವಾಗುತ್ತದೆ ಎಂದರು.
    ಸ್ವಚ್ಛತೆ ಇದ್ದಲ್ಲಿ ಆರೋಗ್ಯವಿರುತ್ತದೆ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಸಾಂಕ್ರಾಮಿಕ ರೋಗಗಳಿಂದ ದೂರವಿರಬಹುದು. ಹಾಗಾಗಿ ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಒ ಡಾ.ಗೋಪಾಲಕೃಷ್ಣ, ಅಧಿಕಾರಿಗಳು ತಮ್ಮ ವ್ಯಾಪ್ತಿಯನ್ನು ಮೀರಿ ಸಾಮಾಜಿಕ ಸೇವೆಯಲ್ಲಿ ಹೇಗೆ ತೊಡಗಿಸಿಕೊಳ್ಳಬಹುದು ಹಾಗೂ ಅಭಿವೃದ್ಧಿಯನ್ನು ಸಾಧಿಸಬಹುದು ಎಂಬುದಕ್ಕೆ ಥೀಮ್ ಪಾರ್ಕಿನ ರೂವಾರಿಯಾಗಿರುವ ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಉದಾಹರಣೆಯಾಗಿದ್ದಾರೆ ಎಂದು ಹೇಳಿದರು.
    ಇದೇ ವೇಳೆ ರೋಟರಿ ಕಾಫಿ ಲ್ಯಾಂಡ್‌ನ ಪಲ್ಸ್ ಪೋಲಿಯೋ ಕಾರ್ಯಕ್ರಮ, ಸ್ವಚ್ಛ ಭಾರತ್, ಅಂಗಾಂಗ ದಾನ, ರೋಟರಿ ಚತುರ್ವಿಧ ಪರೀಕ್ಷೆ, ಎದೆ ಹಾಲಿನ ಮಹತ್ವ ಕುರಿತ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಜೊತೆಗೆ ರೋಟರಿ ಕಾಫಿಲ್ಯಾಂಡ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಗೆ ಸಿಮೆಂಟ್ ಬೆಂಚ್ ಮತ್ತು ಮೈಕ್ ಸೆಟ್ ವಿತರಿಸಲಾಯಿತು.
    ರೋಟರಿ ವಲಯ ಉಪರಾಜ್ಯಪಾಲ ಅನಂತೇಗೌಡ, ರೊಟೇರಿಯನ್ ಗುರುಮೂರ್ತಿ, ಜಿಲ್ಲಾ ಸರ್ಜನ್ ಡಾ. ಮೋಹನ್ ಕುಮಾರ್, ರೋಟರಿ ಕಾಫಿ ಲ್ಯಾಂಡ್ ಅಧ್ಯಕ್ಷ ಪಿ. ತನೋಜ್ ಕುಮಾರ್, ಡಿಎಚ್‌ಓ ಡಾ.ಅಶ್ವಥ್ ಬಾಬು, ಹೆರಿಗೆ ಆಸ್ಪತ್ರೆಯ ಆರ್‌ಎಂಓ ಡಾ. ಕಲ್ಪನಾ, ಡಾ. ಚಂದ್ರಶೇಖರ್, ರೋಟರಿ ಕಾಫಿ ಲ್ಯಾಂಡ್ ಕಾರ್ಯದರ್ಶಿ ನಾಗೇಶ್ ಕೆಂಜಿಗೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts