ಯೋಗೋತ್ಸವ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

Make the necessary preparations for a successful Yoga Festival

ವಿಜಯಪುರ: ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಹಾಗೂ ಆಯುಷ್​ ಇಲಾಖೆಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜತೆಗೆ ಜೂ.21 ರಂದು ಜಿಲ್ಲೆಯಲ್ಲಿ ರಾಜ್ಯಮಟ್ಟದ ಯೋಗೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಯೋಗೋತ್ಸವ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಕಾಡೆಮಿ ವತಿಯಿಂದ ಯೋಗೋತ್ಸವ ಕಾರ್ಯಕ್ರಮಕ್ಕೆ 15 ಲಕ್ಷ ರೂ. ಒದಗಿಸಿದೆ. ಕಾರ್ಯಕ್ರಮ ಯಶಸ್ವಿಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಯೋಗದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಮಕ್ಕಳಿಗೆ ಸನ್ಮಾನ ಹಾಗೂ ಜೂ. 22 ರಂದು ನಗರದ ಕಂದಗಲ್ಲ ರಂಗಮಂದಿರದಲ್ಲಿ ಯೋಗದ ಕುರಿತು ಪರಿಣಿತರಿಂದ ಚಿಂತನಾಗೋಷ್ಠಿ ಹಾಗೂ ಯೋಗ ಪ್ರದರ್ಶನ ನಡೆಯಲಿದ್ದು, ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.

ಜಿಲ್ಲಾಧಿಕಾರಿ ಟಿ. ಭೂಬಾಲನ್​ ಮಾತನಾಡಿ, ಜೂ. 21ರಂದು ನಡೆಯಲಿರುವ ಯೋಗೋತ್ಸವ ಕಾರ್ಯಕ್ರಮದಲ್ಲಿ ಪ.ಪೂ. ಕಾಲೇಜ್​, ಪ್ರೌಢಶಾಲೆ, ವಿವಿಧ ವಸತಿನಿಲಯಗಳು ಸೇರಿ ವಿವಿಧ ಶಾಲಾ&ಕಾಲೇಜಿನ 2,000 ವಿದ್ಯಾರ್ಥಿಗಳು ಭಾಗವಹಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಪೊಲೀಸ್​ ಇಲಾಖೆ ಸೇರಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯೋಗೋತ್ಸವದಲ್ಲಿ ಭಾಗಿಯಾದ ಮಕ್ಕಳಿಗೆ ಗುಣಮಟ್ಟದ ಟೀ ಶರ್ಟ್​, ಕ್ಯಾಪ್​ ಒದಗಿಸಬೇಕು. ಯೋಗದ ಮಹತ್ವ ಕುರಿತ ಕಿರುಪುಸ್ತಕ ಒದಗಿಸುವುದು, ಕಾರ್ಯಕ್ರಮದ ಮಳೆ ಬಂದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಎಲ್​ಇಡಿ ಪರದೆ ಅಳವಡಿಸುವುದು ಸೇರಿ ಮೂಲ ಸೌಲಭ್ಯ ಒದಗಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವಾಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಪ.ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಕೆ. ಹೊಸಮನಿ, ಆಯುಷ್​ ಇಲಾಖೆಯ ಡಾ. ವಿದ್ಯಾವತಿ ಅಥಣಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಟಿ.ಎಸ್​. ಕೊಲ್ಹಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಮತ್ತಿತರರಿದ್ದರು.

ಫೋಟೋ : ಎಂಎಂ 12&9
ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಯೋಗೋತ್ಸವ ಕುರಿತ ಪೂರ್ವಭಾವಿ ಸಭೆಯಲ್ಲಿ ಸಂಗಮೇಶ ಬಬಲೇಶ್ವರ ಮಾತನಾಡಿದರು. ಡಿಸಿ ಟಿ. ಭೂಬಾಲನ್​ ಇದ್ದಾರೆ.

Share This Article

ರೊಟ್ಟಿ, ಚಪಾತಿಗೆ ತುಪ್ಪ ಹಚ್ಚಿ ತಿನ್ನುತ್ತೀರಾ? ಹಾಗಾದ್ರೆ ಈ ಸಮಸ್ಯೆ ಬರಬಹುದು ಎಚ್ಚರ! Health Tips

Health Tips: ಚಪಾತಿ ಎಲ್ಲರಿಗೂ ಅಚ್ಚುಮೆಚ್ಚಿನ ಆಹಾರ. ಪಲ್ಯ, ಸಾಗು, ಜಾಮ್‌, ತುಪ್ಪ ಹೀಗೆ ಎಲ್ಲದರ…

ಯಾರಾದರೂ ನಿಮ್ಮ ಮುಂದೆ ಹಠಾತ್​ ಕುಸಿದುಬಿದ್ರೆ ಏನು ಮಾಡಬೇಕು ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ… Suddenly Collapsed

Suddenly Collapsed : ನೀವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಯಾರಾದರು ಒಬ್ಬರು ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು…