ಮಲೈ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: CM ಸಿದ್ದರಾಮಯ್ಯ ಘೋಷಣೆ

blank

ಚಾಮರಾಜನಗರ:ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ(ಮದ್ಯ) ಮುಕ್ತ ಎಂದು CM ಸಿದ್ದರಾಮಯ್ಯ ಘೋಷಿಸಿದರು.

blank

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿತು.

ಇದನ್ನೂ ಓದಿ:ಕಾಶ್ಮೀರದಲ್ಲಿ ನರಮೇಧ-ಸೌದಿಯಲ್ಲಿ ಪ್ರಧಾನಿ ಮೋದಿಯಿಂದ ಮುಸ್ಲಿಂರ ಆಲಿಂಗನ; ಎಸ್.ಎಂ. ಪಾಟೀಲ ಗಣಿಹಾರ ಆರೋಪ

ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್​​ಗೆ ಸೂಚಿಸಿದರು. ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.

66 ಕಾರ್ಮಿಕ ಕುಟುಂಬಗಳಿಗೆ ಮನೆ ನಿರ್ಮಾಣ

ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು. ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.

ಇದನ್ನೂ ಓದಿ:ವಿಜಯವಾಣಿಯ ಕಿರಣ್ ಪೈಗೆ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ

ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಲಾಯಿತು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ; ಸಿಎಂ ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು ಹೀಗಿವೆ

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ: CM ಸಿದ್ದರಾಮಯ್ಯ

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…