ಮುಂಬೈ: ಬಾಲಿವುಡ್ನ ಖ್ಯಾತ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಮೆಹ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಮುಂಬೈನ ತಮ್ಮ ಮನೆಯ ಮೇಲ್ಛಾವಣಿಯಿಂದ ಕೆಳಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಭಾರತದ ಮರ್ಚೆಂಟ್ ನೇವಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಇದನ್ನೂ ಓದಿ: ನನಗೆ ಹೇಳದೆ… ಪಿಟಿ ಉಷಾ ವಿರುದ್ಧ ಗಂಭೀರ ಆರೋಪ ಮಾಡಿದ ವಿನೇಶ್
ಮುಂಬೈನ ಬಾಬಾ ಆಸ್ಪತ್ರೆಯಲ್ಲಿ ಅನಿಲ್ ಅವರ ಮೃತದೇಹವನ್ನು ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಅನಿಲ್ ಅವರದ್ದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದರೋ ಎಂಬ ಬಗ್ಗೆ ಅನುಮಾನವಿರುವುದಾಗಿ ಪೊಲೀಸರು ತಿಳಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಶೂಟಿಂಗ್ ನಿಮಿತ್ತ ಪೂನಾದಲ್ಲಿದ್ದ ಮಲೈಕಾ ವಿಚಾರ ತಿಳಿದು ಮುಂಬೈಗೆ ವಾಪಸ್ ಆಗಿದ್ದಾರೆ. ಇತ್ತ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಾಜಿ ಪತಿ ಅರ್ಬಾಜ್ ಖಾನ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.