More

    ಮಲೇರಿಯಾಕ್ಕೆ ತಡೆ ಹಾಕಬೇಕೆಂದರೆ ಸೊಳ್ಳೆ ಉತ್ಪತ್ತಿ ನಿಯಂತ್ರಿಸಿ

    ಹೊಳಲ್ಕೆರೆ: ಕೆರೆ, ಹೊಂಡ, ಬಾವಿ, ಗದ್ದೆ, ಜೌಗು ಪ್ರದೇಶಗಳಲ್ಲಿ ಗಾಂಬೂಸಿಯಾ ಮತ್ತು ಗಪ್ಪಿ ಜಾತಿಯ ಲಾರ್ವಾಹಾರಿ ಮೀನುಗಳನ್ನು ಬಿಟ್ಟು ಸೊಳ್ಳೆಗಳ ಉತ್ಪತ್ತಿ ನಿಯಂತ್ರಿಸಬಹುದು ಎಂದು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್ ತಿಳಿಸಿದರು.

    ಪಟ್ಟಣದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಈಚೆಗೆ ಆಯೋಜಿಸಿದ್ದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸೋಂಕು ಹೊಂದಿದ ಹೆಣ್ಣು ಅನಾಫಿಲಿಸ್ ಸೊಳ್ಳೆಗಳು ಮಲೇರಿಯಾ ರೋಗವನ್ನು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತವೆ. ಹೀಗಾಗಿ ಸಾರ್ವಜನಿಕರು ಮನೆ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.

    ತಾಲೂಕು ಆರೋಗ್ಯ ನಿರೀಕ್ಷಕ ಎಂ.ಕೆ.ರಂಗನಾಥ ಮಾತನಾಡಿ, ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂೆ, ಚಿಕೂನ್‌ಗುನ್ಯಾ, ಜಿಕಾ, ಆನೆಕಾಲು ರೋಗ ಹಾಗೂ ಮಿದುಳು ಜ್ಜರ ತಡೆಗಟ್ಟುವ ನಿಟ್ಟಿನಲ್ಲಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸಬೇಕು ಎಂದರು.

    ಆಪ್ತ ಸಲಹೆಗಾರರಾದ ಶಿಲ್ಪಾ, ರೂಪಾ ಪ್ರಸಾದ್ ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts