ಪರಿಸರ ಸ್ವಚ್ಛವಾಗಿಟ್ಟುಕೊಂಡು ಆರೋಗ್ಯ ಕಾಪಾಡಿಕೊಳ್ಳಿ

ಮಳವಳ್ಳಿ: ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಜನರು ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಮಲೇರಿಯಾ ಮತ್ತಿತರರ ಸಾಂಕ್ರಾಮಿಕ ರೋಗಗಳು ಹರಡದಂತೆ ನಿಯಂತ್ರಿಸಲು ಸಾಧ್ಯವೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೀರಭದ್ರಪ್ಪ ತಿಳಿಸಿದರು.

ಪಟ್ಟಣದ ತಾಲೂಕು ಆಸ್ಪತ್ರೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಲೇರಿಯಾ ಸೊಳ್ಳೆಗಳ ಕಡಿತದಿಂದ ಬರಲಿದ್ದು, ರೋಗಾಣುಗಳು ಕಚ್ಚಿದ ಜನರ ದೇಹದಲ್ಲಿ 5 ರಿಂದ 15ದಿನಗಳ ನಂತರ ಕಾಯಿಲೆ ಪ್ರಭಾವ ಹೆಚ್ಚಾಗಲಿದೆ ಎಂದರು.

ವಿಪರೀತ ಚಳಿ, ನಡುಕ, ತಲೆನೋವು, ತೀವ್ರ ಜ್ವರ ದಿನ ಬಿಟ್ಟು ದಿನ ಕಾಣಿಸಿಕೊಳ್ಳುವುದು ರೋಗದ ಪ್ರಮುಖ ಲಕ್ಷಣಗಳಾಗಿದ್ದು, ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಆರೋಗ್ಯ ಇಲಾಖೆ ವತಿಯಿಂದ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರೋಗದಿಂದ ಬಳಲುವವರು ಸಂಖ್ಯೆ ಕಡಿಮೆಯಾಗುತ್ತಿದೆ. ರೋಗ ನಿರ್ಮೂಲನೆಗಳ ಸಂಪೂರ್ಣ ಸ್ವಚ್ಛತೆ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ವೀರಣ್ಣಗೌಡ, ಜಿಲ್ಲಾ ಮಲೇರಿಯಾ ಹಿರಿಯ ಆರೋಗ್ಯ ಸಹಾಯಕ ಮೇಲ್ವಿಚಾರಕ ಚಂದ್ರಶೇಖರ್, ಆಶಾಕಾರ್ಯಕರ್ತೆಯರು ಹಾಜರಿದ್ದರು.

Leave a Reply

Your email address will not be published. Required fields are marked *