ಮಳವಳ್ಳಿಯಲ್ಲಿ ಹಾಡುಹಗಲೇ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ ವ್ಯಕ್ತಿ

malavalli 6 mar 20
Published on

ಮಂಡ್ಯ: ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಹಾಡುಹಗಲೇ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಘಟನೆ ಮಳವಳ್ಳಿ ಪಟ್ಟಣದ ಸಿದ್ದಾರ್ಥ ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.

ಮಾದೇಶ ಎಂಬಾತ ಮಾರಕಾಸ್ತ್ರ ಹಿಡಿದು ಬಡಾವಣೆಯಲ್ಲಿ ಸಂಚರಿಸಿ ಮದ್ಯ ಮಾರಾಟದ ಬಗ್ಗೆ ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದವರಿಗೆ ತಕ್ಕ ಬುದ್ಧಿ ಕಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.
ಈತ ಬಡಾವಣೆಯ ಅಂಗಡಿಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಸಾರ್ವಜನಿಕರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಅಧಿಕಾರಿಗಳು ಅಂಗಡಿ ಮೇಲೆ ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡು ದಂಡ ಕೂಡ ವಿಧಿಸಿದ್ದರು. ಇದರಿಂದ ಕೆರಳಿದ ಆತ ಬೆದರಿಕೆ ಹಾಕಿದ್ದಾನೆ ಎಂದು ಸಾರ್ವಜನಿಕರು ದೂರಿದ್ದಾರೆ.

ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ ಮಾದೇಶನ ವಿರುದ್ಧ ಸಾರ್ವಜನಿಕರು ಮಳವಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net