ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ಮೊದಲ ವಿದೇಶ ಪ್ರವಾಸಕ್ಕಾಗಿ ಮಾಲ್ಡೀವ್ಸ್ಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸರ್ಕಾರದ ಮೂಲಗಳು ಮತ್ತು ಮಾಲ್ಡೀವ್ಸ್ ಮಾಧ್ಯಮಗಳ ವರದಿಯ ಪ್ರಕಾರ ಪ್ರಧಾನಿ ಮೋದಿ ಅವರು ಜೂನ್ 7-8 ರಂದು ಮಾಲ್ಡೀವ್ಸ್ಗೆ ಭೇಟಿ ನೀಡಿ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮದ್ ಸೋಲಿಹ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಕಳೆದ ಮಾರ್ಚ್ನಲ್ಲಿ ಮಾಲ್ಡೀವ್ಸ್ಗೆ ಭೇಟಿ ನೀಡಿ ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.
ಲೋಕಸಭೆ ಚುನಾವಣೆ ಫಲಿತಾಂಶದ ದಿನ ಬಿಜೆಪಿಗೆ ಪ್ರಚಂಬ ಬಹುಮತ ದೊರೆಯುತ್ತಿದ್ದಂತೆ ಮಾಲ್ಡೀವ್ಸ್ ಅಧ್ಯಕ್ಷ ಸೋಲಿಹ್ ಟ್ವೀಟ್ ಮೂಲಕ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದರು.
2014ರಲ್ಲಿ ಪ್ರಧಾನಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ನಮ್ಮ ನೆರೆರಾಷ್ಟ್ರ ಭೂತಾನ್ಗೆ ಭೇಟಿ ನೀಡಿ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧ ವೃದ್ಧಿಸುವ ಸಂಬಂಧ ಮಾತುಕತೆ ನಡೆಸಿದ್ದರು. (ಏಜೆನ್ಸೀಸ್)