ಮ.ಬೆಟ್ಟಕ್ಕೆ ಮೂಲಸೌಕರ್ಯ ಒದಗಿಸಿ

ಮಲೆಮಹದೇಶ್ವರ ಬೆಟ್ಟ, ಪುಟ್ಟರಂಗಶೆಟ್ಟಿ, ಪ್ರಗತಿ ಪರಿಶೀಲನಾ ಸಭೆ

ಹನೂರು:  ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ಶೌಚಗೃಹ ಸೇರಿದಂತೆ ಮೂಲ ಸೌಕರ್ಯ ಕೊರತೆಯಾಗದಂತೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ಮ.ಬೆಟ್ಟದ ನಾಗಮಲೆ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮ.ಬೆಟ್ಟಕ್ಕೆ ಮಹಾಶಿವರಾತ್ರಿ, ಯುಗಾದಿ, ದೀಪಾವಳಿ ಸೇರಿದಂತೆ ಇನ್ನಿತರೆ ವಿಶೇಷ ಸಂದರ್ಭದಲ್ಲಿ ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆಗಮಿಸುವ ಭಕ್ತರಿಗೆ ಸಮರ್ಪಕ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಅಲ್ಲದೆ ಈಗಾಗಲೇ ಹಲವು ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ. ಅವುಗಳನ್ನು ಶೀಘ್ರ ಪೂರ್ಣಗೊಳಿಸುವುದರ ಮೂಲಕ ಭಕ್ತರ ಸೇವೆಗೆ ಸಮರ್ಪಿಸಬೇಕು. ದೇವರ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಗಂಟೆಗಟ್ಟಲೇ ನಿಂತು ಭಕ್ತರು ತೊಂದರೆ ಪಡುತ್ತಿದ್ದಾರೆ. ಈ ಬಗ್ಗೆ ಪರ‌್ಯಾಯ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಶೌಚಗೃಹಗಳನ್ನು ನಿರ್ಮಿಸಿ: ಮ.ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಭಕ್ತರ ಸಂಖ್ಯೆಗೆ ಅನುಗುಣವಾಗಿ ಹಾಗೂ ಭಕ್ತರು ಹೆಚ್ಚು ತಂಗುವ ಸ್ಥಳಗಳಲ್ಲಿ ಶೌಚಗೃಹಗಳಿಲ್ಲ. ಈ ಬಗ್ಗೆ ಗಮನಹರಿಸಿ ಕ್ರೀಯಾಯೋಜನೆ ತಯಾರಿಸಿ ಇನ್ನು ಹೆಚ್ಚು ಶೌಚಗೃಹಗಳನ್ನು ನಿರ್ಮಿಸಬೇಕು. ನ.30ರಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮ.ಬೆಟ್ಟಕ್ಕೆ ಆಗಮಿಸಲಿದ್ದಾರೆ. ಈ ದಿಸೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಲೆಕ್ಕಾಧೀಕ್ಷಕರನ್ನು ವಜಾ ಮಾಡಿ: ಸಭೆಯಲ್ಲಿ ದೇಗುಲದ ಆದಾಯ ಹಾಗೂ ಖರ್ಚು ವೆಚ್ಚಗಳ ಬಗ್ಗೆ ತಿಳಿಸಲಾಗುತ್ತಿತ್ತು. ಈ ವೇಳೆ ಸಚಿವರು ಲೆಕ್ಕಾಧೀಕ್ಷಕರನ್ನು ಕರೆಯಿರಿ ಎಂದು ತಿಳಿಸಿದರು. ಆದರೆ ಲೆಕ್ಕಾಧೀಕ್ಷಕ ಸ್ಥಳದಲ್ಲಿ ಇರಲಿಲ್ಲ. ಈ ಬಗ್ಗೆ ಅಸಮಾಧಾನಗೊಂಡ ಸಚಿವರು ಪ್ರಾಧಿಕಾರದ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಲೆಕ್ಕಾಧೀಕ್ಷರನ್ನು ಕೆಲಸದಿಂದ ವಜಾ ಮಾಡಿ ಎಂದು ಸೂಚಿಸಿದರು.
ಬಳಿಕ ಮ.ಬೆಟ್ಟದಲ್ಲಿನ ಅಭಿವೃದ್ಧಿ ಕಾರ್ಯಗಳು, ದೇಗುಲದ ಸೇವೆಗಳು, ಕೊಠಡಿ, ಅಧಿಕಾರಿಗಳು, ನೌಕರರು, ಸಿಬ್ಬಂದಿಗಳು ಹಾಗೂ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸುಮಾರು 3 ಗಂಟೆಗಳ ಕಾಲ ಚರ್ಚಿಸಲಾಯಿತು.ಟೆಗೆ ತೆಗೆದುಕೊಂಡರು.