ಮಗುವನ್ನು ರಕ್ಷಿಸಲು ಬೇಲಿಗೆ ಎಸೆದು ಕಾಡಾನೆ ದಾಳಿಗೆ ಬಲಿಯಾದ ಮಹಿಳೆ! ಅಪಾಯದಿಂದ ಪಾರಾದ ಮಗು

ಚಾಮರಾಜನಗರ: ಕಾಡಾನೆ ದಾಳಿಯಿಂದ ಮಗುವನ್ನು ಪಾರುಮಾಡಿ ತಾಯಿಯೇ ದಾಳಿಯಿಂದಾಗಿ ಬಲಿಯಾಗಿರುವ ಘಟನೆ ನಡೆದಿದೆ.

ಮಲೆಮಹದೇಶ್ವರ ಬೆಟ್ಟದ ದೊಡ್ಡಾಣೆ ಬಳಿ ಘಟನೆ ನಡೆದಿದ್ದು, ಹಳೆಯೂರು ಗ್ರಾಮದ ಗೌರಮ್ಮ(45) ಎಂಬಾಕೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

ದೊಡ್ಡಾಣೆ ಗ್ರಾಮದಲ್ಲಿ ಹಬ್ಬ ಮುಗಿಸಿ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಕಾಡಾನೆ ಎದುರಾಗಿದೆ. ಕಾಡಾನೆ ಕಂಡು ಕಂಕುಳಲ್ಲಿದ್ದ ಮಗುವನ್ನು ಬೇಲಿಗೆ ಎಸೆದಿದ್ದಾರೆ. ಈ ವೇಳೆ ಕಾಡಾನೆ ಗೌರಮ್ಮನನ್ನು ತುಳಿದು ಸಾಯಿಸಿದೆ.

ಬೇಲಿಗೆ ಎಸೆಯಲ್ಪಟ್ಟಿದ್ದ ಹೆಣ್ಣು ಮಗು ಅಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಹೆಣ್ಣುಮಗುವಿಗೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಸ್ಥಳಕ್ಕೆ ಮಹದೇಶ್ವರ ಬೆಟ್ಟ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *